ರಿಯಾದ್: ಮಸೀದಿಯೊಳಗೆ ವಾಣಿಜ್ಯ ಉತ್ಪನ್ನಗಳು, ವ್ಯಾಪಾರ ಮತ್ತು ಜಾಹೀರಾತುಗಳ ವಿರುದ್ಧ ಧಾರ್ಮಿಕ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ.
ಮಸೀದಿಯ ಪಾವಿತ್ರ್ಯತೆಗೆ ಧಕ್ಕೆ ತರುವ ರೀತಿಯಲ್ಲಿ ವ್ಯಕ್ತಿಯೊಬ್ಬರು ಮಸೀದಿಯೊಳಗೆ ಮಾರಾಟ ಮಾಡಿ ಜಾಹೀರಾತು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
ಅವರು ಮಸೀದಿಯ ಪಾವಿತ್ರ್ಯತೆಯನ್ನು ಉಲ್ಲಂಘಿಸಿದ್ದಾರೆ ಎಂದು ಸಚಿವಾಲಯ ವಿವರಿಸಿದೆ. ಅಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವುದು ಮಸೀದಿಯ ಪಾವಿತ್ರ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ಸಚಿವಾಲಯ ಹೇಳಿದೆ. ಕಾನೂನಿನಿಂದ ನಿಷೇಧಿಸಲಾದ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವಾಲಯ ತಿಳಿಸಿದೆ.