janadhvani

Kannada Online News Paper

ಯುಪಿ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟ‌ರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ- ಮೌನಲ್ಲಿ ಸೆಕ್ಷನ್ 144 ಜಾರಿ

ಇಂದು ಮತ್ತೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗಿತ್ತು.

ಹೊಸದಿಲ್ಲಿ : ಜೈಲಿನಲ್ಲಿದ್ದ ಗ್ಯಾಂಗ್‌ಸ್ಟ‌ರ್ – ರಾಜಕಾರಣಿ ಮುಖ್ತಾರ್ ಅನ್ಸಾರಿ (60) ಗುರುವಾರ ನಿಧನರಾದರು. ಅನ್ಸಾರಿ ಅವರ ಆರೋಗ್ಯ ಮತ್ತೆ ಹದಗೆಟ್ಟ ಹಿನ್ನೆಲೆಯಲ್ಲಿ ಬಂದಾ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ವಕೀಲರು ತಿಳಿಸಿದ್ದಾರೆ.

ಮುಕ್ತಾರ್ ಅನ್ಸಾರಿ ನಿಧನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಗಾಜಿಪುರದ ಮೌನಲ್ಲಿ ಸೆಕ್ಷನ್ 144 ಅನ್ನು ವಿಧಿಸಿದೆ.ಇನ್ನೊಂದೆಡೆಗೆ ಅನ್ಸಾರಿ ವ್ಯಾಪಕ ಪ್ರಭಾವವನ್ನು ಹೊಂದಿದ್ದ ಗಾಜಿಯೂರ್, ಬಲಿಯಾ ಮತ್ತು ಪ್ರಯಾಗ್‌ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮಂಗಳವಾರ, ಅನ್ಸಾರಿ ಅವರನ್ನು ಬಂದಾ ಜೈಲಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮತ್ತೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಗಳವಾರ ಬೆಳಿಗ್ಗೆ ಅವರನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಮಲಬದ್ಧತೆ ಇದೆ ಎಂದು ಗುರುತಿಸಿದರು ಮತ್ತು ಚಿಕಿತ್ಸೆ ನಂತರ ಅವರನ್ನು ಅದೇ ದಿನ ಜೈಲಿಗೆ ಕಳುಹಿಸಿದ್ದರು. ಬುಧವಾರ ಜೈಲಿನಲ್ಲಿ ಅವರ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲವೂ ಸಹಜವಾಗಿತ್ತು. ಆದರೆ ಇಂದು ನಿಧನ ಹೊಂದಿದ್ದಾರೆ.

ಇತ್ತೀಚೆಗೆ ಜೈಲಿನಲ್ಲಿ ತನ್ನನ್ನು ಕೊಲೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಆರೋಪಿಸಿದ್ದರು. ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡಲಾಗುತ್ತಿದ್ದು, ಇದರಿಂದ ಆರೋಗ್ಯ ಹದಗೆಡುತ್ತಿದೆ ಎಂದು ಹೇಳಿದ್ದರು. ಸಂಸದ ಎಂಎಲ್ಎ ಕೋರ್ಟ್ ಕೂಡ ಈ ವಿಚಾರದಲ್ಲಿ ಜೈಲು ಆಡಳಿತದಿಂದ ವರದಿ ಕೇಳಿತ್ತು.

ಮುಖ್ತಾರ್ ಅನ್ಸಾರಿ ಅವರು ಎರಡು ಬಾರಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಸೇರಿದಂತೆ ಐದು ಬಾರಿ ಮೌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಕೊನೆಯ ಬಾರಿಗೆ 2017 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

error: Content is protected !! Not allowed copy content from janadhvani.com