ಹರಿಯಾಣದ ನರ್ನೋಲ್ ನಲ್ಲಿ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಬೆಳಗ್ಗೆ ಹರಿಯಾಣದ ನರ್ನೋಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಜಿಎಲ್ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ಬಸ್ ನಾರ್ನೋಲ್‌ನ ಕನಿನಾದ ಉನ್ಹಾನಿ ಗ್ರಾಮದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈದ್-ಉಲ್-ಫಿತರ್ ರಜೆಯಲ್ಲೂ ಶಾಲೆ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಚಾಲಕ ಪಾನಮತ್ತನಾಗಿದ್ದ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಾಲಾ ಬಸ್‌ನ ಫಿಟ್‌ನೆಸ್ ಪ್ರಮಾಣಪತ್ರದ ಅವಧಿ 2018 ರಲ್ಲಿ ಮುಗಿದಿದೆ ಎಂದು ತಪಾಸಣೆಯಲ್ಲಿ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.