ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಪ್ರಚಾರಕ್ಕೆ ಬಳಸಿಕೊಂಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕತ್ವ ಚುನಾವಣಾ ಆಯೋಗವನ್ನು ಸಂಪರ್ಕಿಸಿದೆ. ಆದರೆ, ಬಿಜೆಪಿ ಕಾನೂನು ಹೋರಾಟಕ್ಕೆ ಮುಂದಾದರೆ, ತಮ್ಮ ವಾದವನ್ನು ಆಲಿಸದೆ ತೀರ್ಪು ನೀಡಬಾರದು ಎಂದು ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಮೂಲ ಗಳು ತಿಳಿಸಿವೆ.
ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ತಮ್ಮ ಮಗನಿಗೆ ಸೀಟು ನೀಡದ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿವೈ ರಾಘವೇಂದ್ರ ಇಲ್ಲಿ ಬಿಜೆಪಿ ಅಭ್ಯರ್ಥಿ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಹಾಗೂ ಕನ್ನಡದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ.