ನವದೆಹಲಿ: ದೇಶದ ಸಮಗ್ರ ಅಭಿವೃದ್ಧಿಗಾಗಿ ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ಜನತೆಗೆ ಅವರು ಶುಭಾಶಯ ಕೋರಿ ಮಾತನಾಡಿದ
ದ್ರೌಪದಿ ಮುರ್ಮು , ಅಂಬೇಡ್ಕರ್ ಅವರು ಸಾಮಾಜಿಕ ಬದಲಾವಣೆಯ ಹರಿಕಾರರು ಮತ್ತು ನ್ಯಾಯಶಾಸ್ತ್ರಜ್ಞರಾಗಿ, ಶಿಕ್ಷಣತಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ ಮತ್ತು ರಾಜಕೀಯ ನಾಯಕರಾಗಿ ನಮ್ಮ ದೇಶ ಮತ್ತು ಸಮಾಜಕ್ಕೆ ಅಸಾಮಾನ್ಯ ಕೊಡುಗೆಗಳನ್ನು ನೀಡಿದ ಬಹುಮುಖ ವ್ಯಕ್ತಿತ್ವ.
ಸಾಂವಿಧಾನಿಕ ವ್ಯವಸ್ಥೆಯಲ್ಲಿ ಅವರ ಬಲವಾದ ನಂಬಿಕೆ ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ.
ಅಂಬೇಡ್ಕರ್ ಅವರು ತಮ್ಮ ಇಡೀ ಜೀವನವನ್ನು ಸಮಾನತೆಯ ಸಮಾಜ ಸ್ಥಾಪನೆಗೆ ಮುಡಿಪಾಗಿಟ್ಟರು ಮತ್ತು ದೀನದಲಿತರ ಉನ್ನತಿಗಾಗಿ ಹೋರಾಡಿದರು ಎಂದು ಹೇಳಿದರು.