janadhvani

Kannada Online News Paper

ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ

ಕೋಝಿಕ್ಕೋಡ್ : ತೆಲಂಗಾಣದಲ್ಲಿ ಕ್ಯಾಥೋಲಿಕ್ ಶಾಲೆಯ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ತೆಲಂಗಾಣ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿಯ ಘಟನೆಗಳು ಹೆಚ್ಚುತ್ತಿವೆ. ಜಾಗತಿಕ ಮಟ್ಟದಲ್ಲಿ ದೇಶವು ತಲೆ ತಗ್ಗಿಸುವಂತೆ ಮಾಡುವ ಇಂತಹ ಘಟನೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದೇ ಇದಕ್ಕೆ ಪರಿಹಾರ.
ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿರುವ ಅಭದ್ರತೆಯ ವರದಿಗಳು ಹೊರಬರುತ್ತಿದೆ.

ಮುಸ್ಲಿಂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ
ಕೋಮು ದಾಳಿಗಳು ನಡೆಯುವುದು
ಇಂದು ಸಾಮಾನ್ಯವಾಗಿ ಬಿಟ್ಟಿದೆ. ಅಲ್ಪಸಂಖ್ಯಾತರಿಗೆ
ಸ್ವಂತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸಿಕೊಂಡು ಹೋಗುವ ಹಕ್ಕನ್ನು ಸಂವಿಧಾನ ಖಾತರಿಪಡಿಸಿದೆ.
ಅದನ್ನು ರಕ್ಷಿಸುವ ಹೊಣೆಗಾರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊಂದಿವೆ.

ತೆಲಂಗಾಣ ಘಟನೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮದರ್ ತೆರೇಸಾ ಶಾಲೆಯ ಆಡಳಿತ ದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತೆಲಂಗಾಣ ಪೊಲೀಸರು ಅಪರಾಧಿಗಳನ್ನು ನ್ಯಾಯಾಂಗಕ್ಕೆ ತರುವ ಬದಲು ಶಾಲಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಕ್ರಮ ಕೈಗೊಂಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಶಾಲೆಯ ವಿರುದ್ಧದ ಪ್ರಕರಣವನ್ನು ಹಿಂಪಡೆಯಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯನ್ನು ಖಚಿತಪಡಿಸುವಂತೆ ಪತ್ರವನ್ನು ಕಳುಹಿಸಲಾಗಿದೆ ಎಂದು ಎ ಪಿ ಉಸ್ತಾದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com