ರಿಯಾದ್: ರಿಯಾದ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್ ವೇಯಿಂದ ಸ್ಕಿಡ್ ಆಗಿದೆ. ಭಾನುವಾರ ರಾತ್ರಿ ಘಟನೆ ನಡೆದಿದೆ. ದೋಹಾದಿಂದ ಹೊರಟಿದ್ದ ಫ್ಲೈನಾಸ್ ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ಮುಖ್ಯ ರನ್ವೇಯಿಂದ ಜಾರಿತು ಎಂದು ಕಿಂಗ್ ಖಾಲಿದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ವಿಮಾನವು ಬಫರ್ ಪ್ರದೇಶದ ಮೂಲಕ ಸಂಚರಿಸಿ, ಹತ್ತಿರದ ಗ್ರೌಂಡ್ ರನ್ವೇ ಮೇಲೆ ನಿಂತಿತು. ಪ್ರಯಾಣಿಕರು ಮತ್ತು ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸಿದ ನಂತರ, ವಿಮಾನವು ಗೊತ್ತುಪಡಿಸಿದ ನಿಲುಗಡೆಗೆ ತನ್ನ ಪ್ರಯಾಣವನ್ನು ಪೂರ್ಣಗೊಳಿಸಿತು.
ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ವಿಮಾನ ನಿಲ್ದಾಣದ ಆಡಳಿತ ಮಂಡಳಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದೆ. ಯಾರಿಗೂ ಗಾಯಗಳಾಗಿಲ್ಲ ಮತ್ತು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಕಿಂಗ್ ಖಾಲಿದ್ ವಿಮಾನ ನಿಲ್ದಾಣದ ಆಡಳಿತ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ