ಚಿಕ್ಕಮಗಳೂರು 01/05/2024 ರಂದು ನಗರದ ಪೂರ್ಖಾನಿಯ ಶಾದಿ ಮಹಲ್ ನಲ್ಲಿ ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಶಾಹಿದ್ ರಜ್ವಿ ರವರ ನೇತೃತ್ವದಲ್ಲಿ 2024 ನೆ ಸಾಲಿನ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಸರ್ಕಾರಿ ಜಿಲ್ಲಾ ಆಸ್ಪತ್ರೆ ಹಾಗು ತಾಜಿರಾನ್ ಮಸೀದಿಯ ಅಧ್ಯಕ್ಷರಾದ ಆರ್ ಎ ಸಲೀಂ ರವರ ಸಹಯೋಗದೊಂದಿಗೆ ಲಸಿಕೆ ಕಾರ್ಯಕ್ರಮವನ್ನು ಏರ್ಪ
ಡಿಸಲಾಗಿತ್ತು.
ಈ ಲಸಿಕಾ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ 157 ಮತ್ತು ಚಿಕ್ಕಮಗಳೂರು ಜಿಲ್ಲೆಯ 172 ಒಟ್ಟು 329 ಹಜ್ ಯಾತ್ರಾರ್ಥಿಗಳು ಭಾಗವಹಿಸಿದ್ದರು ಎಲ್ಲಾ ಯಾತ್ರಾರ್ಥಗಳಿಗೆ ಆರೋಗ್ಯ ತಪಾಸಣೆಯೊಂದಿಗೆ ಲಸಿಕೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು ಸದರಿ ಲಸಿಕಾ ಕಾರ್ಯಕ್ರಮದಲ್ಲಿ ಸಹಕರಿಸಿದ ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಪಾಲ್ಗೊಂಡಿದ್ದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆಯನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷರುಗಳಾದ ಅಶ್ಫಾಕ್ ಪಟೇಲ್, ಶೈಖ್ ಫರೀದ್, ಮತ್ತು ಧಾರ್ಮಿಕ ಮುಖಂಡರು ಭಾಗವಹಿಸಿದ್ದರು ಎಂದು ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರಾದ ಹಾಜಿ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.