ಬೆಳ್ತಂಗಡಿ (ಮೆ-8): ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ. ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ (79ವ) ಅವರ ಅಗಲುವಿಕೆ ರಾಜಕೀಯ ಕ್ಷೇತ್ರಕ್ಕೆ ಹಾಗೂ ಬೆಳ್ತಂಗಡಿ ಜನತೆಗೆ ತುಂಬಲಾರದ ನಷ್ಟ.
ರಾಜ್ಯದ ಸಚೇತಕರಾಗಿ, ಶಾಸಕರಾಗಿ ಅವರು ಸಲ್ಲಿಸಿದ ಸೇವೆ ಸದಾ ನೆನಪಿನಲ್ಲಿ ಉಳಿಯುವಂತಹದ್ದು ಎಂದು ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ತಮ್ಮ ಸಂತಾಪ ಸೂಚಿಸಿದ್ದಾರೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ವಸಂತ ಬಂಗೇರ ಅವರ ಕುಟುಂಬದವರಿಗೆ ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ವಸಂತ ಬಂಗೇರ ಅವರ ನಿಧನಕ್ಕೆ ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ