ಮಂಗಳೂರು, ಮೇ 16: ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್)ನ ದಶಮಾನೋತ್ಸವ ಕಾರ್ಯಕ್ರಮವು ಮೇ 19ರಂದು(ನಾಳೆ) ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ.
10 ವರ್ಷಗಳ ಹಿಂದೆ ಸ್ಥಾಪನೆಗೊಂಡ ಕೆಸಿಎಫ್ ಇಂದು ಆರು ಕೊಲ್ಲಿ ರಾಷ್ಟ್ರಗಳಲ್ಲದೆ ಬ್ರಿಟನ್, ಮಲೇಷ್ಯಾದಲ್ಲೂ ಶಾಖೆಗಳನ್ನು ಹೊಂದಿವೆ. ಉದ್ಯೋಗ ನಿಮಿತ್ತ ಗಲ್ಫ್ ರಾಷ್ಟ್ರಗಳಿಗೆ ತೆರಳಿರುವ ಕನ್ನಡಿಗರ ಪೈಕಿ ಹಲವರು ರೋಗರುಜಿನಗಳಿಗೆ, ಕಾನೂನು ಕ್ರಮಗಳಿಗೆ ಗುರಿಯಾಗುವುದು, ಶೋಷಣೆಗೆ ಒಳಗಾಗುವುದು ಇತ್ಯಾದಿ ಸಮಸ್ಯೆಗೆ ಈಡಾಗುತ್ತಾರೆ. ಇಂತಹ ಸಂದರ್ಭ ಕೆಸಿಎಫ್ ಮಧ್ಯಪ್ರವೇಶಿಸಿ ಜಾತಿ, ಮತ ಭೇದವಿಲ್ಲದೆ ಪರಿಹಾರ ಒದಗಿಸುವುದಲ್ಲದೆ ಜೈಲಿನಿಂದ ಬಿಡುಗಡೆಗೊಳಿಸಿ ಊರಿಗೆ ಕಳುಹಿಸುವುದು, ಮೃತದೇಹಗಳ ಅಂತ್ಯಸಂಸ್ಕಾರ ಮಾಡುವುದು ಇತ್ಯಾದಿಗಳಲ್ಲದೆ ಕೋವಿಡ್ ಸಂದರ್ಭ 15 ಚಾರ್ಟರ್ಡ್ ವಿಮಾನಗಳ ಮೂಲಕ ಅನೇಕ ಮಂದಿ ಮನೆಗೆ ಮರಳುವಂತೆ ಮಾಡಲಾಗಿದೆ ಎಂದು ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ(INC) ಯ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್ ಇತ್ತೀಚೆಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೆಸಿಎಫ್ ದಶಮಾನೋತ್ಸವ ಕಾರ್ಯಕ್ರಮವು ಮೇ 19ರಂದು ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ನಡೆಯಲಿದೆ. ದಶಮಾನೋತ್ಸವ ಪ್ರಯುಕ್ತ 10 ಜೋಡಿ ಸಾಮೂಹಿಕ ಮದುವೆ, 10 ಕುಟುಂಬಕ್ಕೆ ಮನೆ ನಿರ್ಮಾಣ,10 ಸರಕಾರಿ ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, 10 ಸಾರ್ವಜನಿಕ ಕೊಳವೆ ಬಾವಿ ಸಹಿತ ವಿವಿಧ 10 ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಕುಟುಂಬ ಸಂಗಮ, ವಿದ್ಯಾರ್ಥಿ ಸಮಾವೇಶ, ಎಕ್ಸಲೆನ್ಸಿ ಮೀಟ್, ಪ್ರತಿನಿಧಿ ಸಮ್ಮೇಳನ ನಡೆಯಲಿದೆ ಎಂದು ಡಿಪಿ ಯೂಸುಫ್ ಸಖಾಫಿ ಹೇಳಿದರು.
ಮುಖ್ಯ ಅತಿಥಿಯಾಗಿ ಭಾರತದ ಗ್ರಾಂಡ್ ಮುಪ್ತಿ ಉಲಮಾ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್ ಭಾಗವಹಿಸಲಿದ್ದಾರೆ. ಸುನ್ನಿ ಜಂ ಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಸಮಾವೇಶ ಉದ್ಘಾಟಿಸಲಿದ್ದಾರೆ. ಮೌಲಾನಾ ಪೆರೋಡ್ ಅಬ್ದುರಹ್ಮಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದಾರೆ. ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಕೂರತ್ ತಂಙಳ್, ಸಯ್ಯಿದ್ ಖಲೀಲ್ ತಂಙಳ್, ಡಾ. ಯೆನೆಪೊಯ ಅಬ್ದುಲ್ಲ ಕುಂಞ ಸಹಿತ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ಶಾಫಿ ಸಅದಿ, ಕೆಸಿಎಫ್ ದಶಮಾನೋತ್ಸವ ಸಮ್ಮೇಳನ ಸಮಿತಿಯ ಅಧ್ಯಕ್ಷ ಹಾಜಿ ಅಬೂಬಕರ್ ರೈಸ್ಕೋ, ಸಮ್ಮೇಳನ ಸಮಿತಿಯ ಕಾರ್ಯದರ್ಶಿ ಹಾಜಿ ಮುತ್ತಾಝ್ ಅಲಿ ಕೃಷ್ಣಾಪುರ, ಎಸ್‌ವೈಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಸಮ್ಮೇಳನ ಸ್ವಾಗತ ಸಮಿತಿಯ ನಿರ್ವಾಹಕ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕರ್ನಾಟಕ ಮುಸ್ಲಿಂ ಜಮಾಅತ್ ದ,ಕ.ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹೀಂ ಸಅದಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?