ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಇನ್ನೊಂದು ವಾರದೊಳಗೆ ಎಂಜಿನಿಯರಿಂಗ್ ಕೋರ್ಸ್ಗಳ ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಇದೇ 7ರಂದು ನಿಗದಿಯಾಗಿದ್ದ ಸಾಮಾನ್ಯ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ನಾಟಾ ಪರೀಕ್ಷೆಯ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ವಾಸ್ತುಶಿಲ್ಪ ಕೋರ್ಸ್ಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ದಾಖಲಾತಿ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ ಹಾಗಾಗಿ ಪ್ರಕ್ರಿಯೆನ್ನು ಮುಂದೂಡಲಾಗಿದೆ ಎಂದು ಸಿಇಟಿ ನಿರ್ದೇಶಕರು ತಿಳಿಸಿದರು.
‘ಇಲಾಖೆ ಸಚಿವರು ಯಾರು ಎಂಬುದು ಬುಧವಾರ ತಿಳಿಯಲಿದ್ದು, ನಂತರ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಇತ್ಯರ್ಥವಾಗಲಿದೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ವಾರದೊಳಗೆ ದಿನಾಂಕ ನಿಗದಿ ಮಾಡು ತ್ತೇವೆ’ ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಖತ್ರಿ ತಿಳಿಸಿದರು.
‘ಕಳೆದ ಬಾರಿಯಂತೆಯೇ ಈ ಬಾರಿಯೂ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತದೆ. ಕ್ರೀಡೆ ಸೇರಿದಂತೆ ಯಾವುದೇ ಕೋಟಾದಲ್ಲಿಯೂ ಬದಲಾವಣೆಗಳಿಲ್ಲ’ ಎಂದು ಅವರು ಹೇಳಿದರು.