janadhvani

Kannada Online News Paper

NDA ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಆಯ್ಕೆ- ಜೂ. 8 ರಂದು ಪ್ರಮಾಣ ವಚನ ಸ್ವೀಕಾರ

ಟಿಡಿಪಿ, ಜೆಡಿಯು, ಎಲ್‌ಜೆಪಿ, ಶಿವಸೇನೆ, ಜೆಡಿಎಸ್‌‍ ಸೇರಿದಂತೆ ಮತ್ತಿತರ ಪ್ರಾದೇಶಿಕ ಪಕ್ಷಗಳ ಮುಖಂಡರು ಮೊದಲ ಹಂತದಲ್ಲೇ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ.

ನವದೆಹಲಿ,ಜೂ.5: ಲೋಕಸಭೆ ಚುನಾವಣೆಯ ಫಲಿತಾಂಶವು ನಿನ್ನೆ ಪ್ರಕಟಗೊಂಡಿದ್ದು, 292 ಸ್ಥಾನಗಳ ಅಲ್ಫ ಬಹುಮತದೊಂದಿಗೆ ಗೆಲುವು ಸಾಧಿಸಿರುವ NDA ಮೈತ್ರಿ ಕೂಟವು ಸರ್ಕಾರ ರಚನೆಗೆ ಮುಂದಾಗಿದೆ.

2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ(BJP) ಬಹುಮತವನ್ನು ಕಳಕೊಂಡ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಮಿತ್ರಕೂಟ ಪಕ್ಷಗಳು ತಮಗಿರುವ ಸಂಸದರ ಸಂಖ್ಯಾಬಲದ ಬೆಂಬಲ ಪತ್ರವನ್ನು ನೀಡಿದ್ದಾರೆ.

ಒಟ್ಟು 294 ಸಂಸದರ ಬೆಂಬಲ ಪತ್ರವನ್ನು ರಾಷ್ಟ್ರಪತಿಗಳಿಗೆ ನೀಡಲಾಗಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿಸಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ನರೇಂದ್ರಮೋದಿ ಹಾಗೂ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಗೌಪ್ಯತೆ ಬೋಧಿಸಲು ಸಮತಿಸಿದ್ದಾರೆ ಎಂದು ತಿಳಿದುಬಂದಿದೆ. ನರೇಂದ್ರಮೋದಿ ಅವರು ಈ ತಿಂಗಳ 8(ಶನಿವಾರ)ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಶುಕ್ರವಾರ ಎನ್‌ಡಿಎ ಮಿತ್ರಪಕ್ಷಗಳ ಎಲ್ಲ ಸಂಸದರು ದೆಹಲಿಗೆ ಬರುವಂತೆ ಸೂಚಿಸಲಾಗಿದೆ. ಅಂದು ಸದಸ್ಯರನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ. ಕರ್ನಾಟಕದ 18 ಸಂಸದರು ಗುರುವಾರವೇ ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ.

ಎನ್‌ಡಿಎ ಮೈತ್ರಿಕೂಟವು ಮೋದಿ ಅವರನ್ನು ಪ್ರಧಾನಿ ಮಾಡುವ ನಿರ್ಣಯಕ್ಕೆ ಬೆಂಬಲ ಸೂಚಿಸಿವೆ. ಮೋದಿಯವರೊಂದಿಗೆ ಮಿತ್ರಪಕ್ಷದ ಹಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಟಿಡಿಪಿ, ಜೆಡಿಯು, ಎಲ್‌ಜೆಪಿ, ಶಿವಸೇನೆ, ಜೆಡಿಎಸ್‌‍ ಸೇರಿದಂತೆ ಮತ್ತಿತರ ಪ್ರಾದೇಶಿಕ ಪಕ್ಷಗಳ ಮುಖಂಡರು ಮೊದಲ ಹಂತದಲ್ಲೇ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಮೊದಲ ಹಂತದಲ್ಲಿ ಅಮಿತ್‌ ಷಾ, ರಾಜನಾಥ್‌ ಸಿಂಗ್‌, ನಿರ್ಮಲ ಸೀತಾರಾಮನ್‌, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ. ಹೊಸ ಸಚಿವ ಸಂಪುಟದ ಮುಖಗಳಿಗೆ ಸಂಬಂಧಿಸಿದಂತೆ ಮಿತ್ರಪಕ್ಷಗಳೊಂದಿಗೆ ಮಾತುಕತೆ ಮತ್ತು ಸಭೆಗಳ ಸುತ್ತು ಕೂಡ ತೀವ್ರಗೊಂಡಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ 234 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ ಏಕಾಂಗಿಯಾಗಿ 240 ಸ್ಥಾನಗಳನ್ನು ಗೆದ್ದಿದೆ. ಅಂತಹ ಪರಿಸ್ಥಿತಿಯಲ್ಲಿ ಇದು ಬಹುಮತದ ಅಂಕ (272) ಗಿಂತ ಬಹಳ ಹಿಂದೆ ಇದೆ.

error: Content is protected !! Not allowed copy content from janadhvani.com