ನವದೆಹಲಿ,ಜೂ.5: ಲೋಕಸಭೆ ಚುನಾವಣೆಯ ಫಲಿತಾಂಶವು ನಿನ್ನೆ ಪ್ರಕಟಗೊಂಡಿದ್ದು, 292 ಸ್ಥಾನಗಳ ಅಲ್ಫ ಬಹುಮತದೊಂದಿಗೆ ಗೆಲುವು ಸಾಧಿಸಿರುವ NDA ಮೈತ್ರಿ ಕೂಟವು ಸರ್ಕಾರ ರಚನೆಗೆ ಮುಂದಾಗಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ(BJP) ಬಹುಮತವನ್ನು ಕಳಕೊಂಡ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಮಿತ್ರಕೂಟ ಪಕ್ಷಗಳು ತಮಗಿರುವ ಸಂಸದರ ಸಂಖ್ಯಾಬಲದ ಬೆಂಬಲ ಪತ್ರವನ್ನು ನೀಡಿದ್ದಾರೆ.
ಒಟ್ಟು 294 ಸಂಸದರ ಬೆಂಬಲ ಪತ್ರವನ್ನು ರಾಷ್ಟ್ರಪತಿಗಳಿಗೆ ನೀಡಲಾಗಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿಸಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ನರೇಂದ್ರಮೋದಿ ಹಾಗೂ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಗೌಪ್ಯತೆ ಬೋಧಿಸಲು ಸಮತಿಸಿದ್ದಾರೆ ಎಂದು ತಿಳಿದುಬಂದಿದೆ. ನರೇಂದ್ರಮೋದಿ ಅವರು ಈ ತಿಂಗಳ 8(ಶನಿವಾರ)ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಶುಕ್ರವಾರ ಎನ್‌ಡಿಎ ಮಿತ್ರಪಕ್ಷಗಳ ಎಲ್ಲ ಸಂಸದರು ದೆಹಲಿಗೆ ಬರುವಂತೆ ಸೂಚಿಸಲಾಗಿದೆ. ಅಂದು ಸದಸ್ಯರನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ. ಕರ್ನಾಟಕದ 18 ಸಂಸದರು ಗುರುವಾರವೇ ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ.
ಎನ್‌ಡಿಎ ಮೈತ್ರಿಕೂಟವು ಮೋದಿ ಅವರನ್ನು ಪ್ರಧಾನಿ ಮಾಡುವ ನಿರ್ಣಯಕ್ಕೆ ಬೆಂಬಲ ಸೂಚಿಸಿವೆ. ಮೋದಿಯವರೊಂದಿಗೆ ಮಿತ್ರಪಕ್ಷದ ಹಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಟಿಡಿಪಿ, ಜೆಡಿಯು, ಎಲ್‌ಜೆಪಿ, ಶಿವಸೇನೆ, ಜೆಡಿಎಸ್ ಸೇರಿದಂತೆ ಮತ್ತಿತರ ಪ್ರಾದೇಶಿಕ ಪಕ್ಷಗಳ ಮುಖಂಡರು ಮೊದಲ ಹಂತದಲ್ಲೇ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ಮೊದಲ ಹಂತದಲ್ಲಿ ಅಮಿತ್ ಷಾ, ರಾಜನಾಥ್ ಸಿಂಗ್, ನಿರ್ಮಲ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ. ಹೊಸ ಸಚಿವ ಸಂಪುಟದ ಮುಖಗಳಿಗೆ ಸಂಬಂಧಿಸಿದಂತೆ ಮಿತ್ರಪಕ್ಷಗಳೊಂದಿಗೆ ಮಾತುಕತೆ ಮತ್ತು ಸಭೆಗಳ ಸುತ್ತು ಕೂಡ ತೀವ್ರಗೊಂಡಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ 234 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ ಏಕಾಂಗಿಯಾಗಿ 240 ಸ್ಥಾನಗಳನ್ನು ಗೆದ್ದಿದೆ. ಅಂತಹ ಪರಿಸ್ಥಿತಿಯಲ್ಲಿ ಇದು ಬಹುಮತದ ಅಂಕ (272) ಗಿಂತ ಬಹಳ ಹಿಂದೆ ಇದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ