janadhvani

Kannada Online News Paper

SSF ದಅವಾ ಸೆನ್ಸೋರಿಯಂ ನಾಳೆ ಮಿತ್ತೂರು ಕೆ.ಜಿ.ಎನ್ ಕ್ಯಾಂಪಸ್ ನಲ್ಲಿ

ಪುತ್ತೂರು : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ದಅವಾ ವಿದ್ಯಾರ್ಥಿ ಸಂಗಮ ಸೆನ್ಸೋರಿಯಂ ನಾಳೆ ಆದಿತ್ಯವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 2.00ರ ತನಕ ಮಿತ್ತೂರು ಕೆ.ಜಿ.ಎನ್ ಕ್ಯಾಂಪಸ್ ನಲ್ಲಿ ನಡೆಯಲಿದೆ.

ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ ತಂಙಳ್ ದುಆ ಮೂಲಕ ಚಾಲನೆ ನೀಡಲಿರುವ ಕಾರ್ಯಕ್ರಮವನ್ನು ಕರ್ನಾಟಕ ಸುನ್ನಿ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರಾದ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್, ಮಾಣಿ ಉದ್ಘಾಟಿಸಲಿದ್ದಾರೆ. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಮಿಸ್ಬಾಹಿ ಕಡಬ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ತ್ವಾಹಿರ್ ಸಖಾಫಿ ಮಂಜೇರಿ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಸುಮಾರು 500ರಷ್ಟು ದಅವಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಪ್ರ. ಕಾರ್ಯದರ್ಶಿ ಮುಸ್ತಫಾ ಉರುವಾಲುಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.