ಮುಡಿಪು :ಯಸ್ ಯನ್ ಅಬ್ದುಲ್ ಕರೀಮ್ ಜುಮಾ ಮಸೀದಿ ಇರಾಸೈಟ್ ಇಲ್ಲಿನ ಸಿರಾಜುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ ಬಹು ಅಬ್ದುಲ್ ರವೂಫ್ ರವರು ವಹಿಸಿದ್ದರು. ಜುಮಾ ಮಸೀದಿ ಇರಾಸೈಟ್ ಇಲ್ಲಿನ ಖತೀಬ್ ಹಸನ್ ಅಹ್ಸನಿ ದುಆ ಹಾಗೂ ಸಂದೇಶ ಭಾಷಣ ಮಾಡುತ್ತಾ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು,ಅದನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ನಾವು ಸನ್ನದ್ಧರಾಗಬೇಕಿಗಿದೆ ಎಂದರು.
ಸಿರಾಜುಲ್ ಹುದಾ ಮದರಸದ ಮುಅಲ್ಲಿಮ್ ಮಹಮ್ಮದ್ ಅಶ್ರಫ್ ಝುಹರಿ,ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಸಭೆಯ ಮುಂದಿಟ್ಟರು. ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಉಮರ್.ಎಸ್. ಕೋಶಾಧಿಕಾರಿ ಉಮರ್ ಸಂಗಂ. ಜೊತೆ ಕಾರ್ಯದರ್ಶಿ ಝೈನುದ್ದೀನ್. ಜಮಾಅತ್ ಕಮಿಟಿ ಸದಸ್ಯರುಗಳಾದ ಇಬ್ರಾಹಿಮ್ ಪಿ.ಎ.ರಹೀಮ್ ಪರ್ಲಡ್ಕ,ಅಬ್ದುಲ್ ರಹಿಮಾನ್ ಅಂಗಡಿ ಹಾಗೂ ಎಲ್ಲಾ ಅಂಗಸಂಸ್ಥೆಗಳ ನಾಯಕರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್