ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು. ಇಡಿ ದಾಳಿ ನಡೆಸುವುದಾಗಿ ಬೆದರಿಸಿ ಕಾರ್ಪೊರೇಟ್ ಸಂಸ್ಥೆಗಳಿಂದ ಸಾವಿರಾರು ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
“ಐಪಿಸಿ ಸೆಕ್ಷನ್ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್ ದಾಖಲಾಗಿದೆ.
“ಈಗ ರದ್ದಾದ ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿತ್ತು.
“ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಸುಲಿಗೆ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದ್ದು, ಅದಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
“ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ನಿನ್ನೆ ಒತ್ತಾಯಿಸಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್