ಪುತ್ತೂರು : ಇಂದು ನಮ್ಮನ್ನಗಲಿದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯಮಿಕ ಮೇರು ವ್ಯಕ್ತಿ ಬಿ. ಎಂ. ಮುಂತಾಝ್ ಆಲಿಯವರ ಅಗಲುವಿಕೆಯು ಸಮಾಜಕ್ಕೆ ಹಾಗೂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಹಲವಾರು ವಿದ್ಯಾ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಅಜರಾಮರ ವ್ಯಕ್ತಿಯಾಗಿದ್ದರು. ಎಲ್ಲಾ ವಿಭಾಗದಲ್ಲಿ ಅವರ ಪಾತ್ರ ಅತ್ಯಂತ ಪ್ರಾಮುಖ್ಯತೆ ಪಡೆದಿತ್ತು. ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ವೆಸ್ಟ್ ಜಿಲ್ಲಾಧ್ಯಕ್ಷರಾಗಿ, ಹಲವು ಶೈಕ್ಷಣಿಕ, ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದರು. ಅವರು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆಗೆ ಒತ್ತುಕೊಡುತ್ತಿದ್ದರು. ಅವರ ಮರಣದಲ್ಲಿ ಕೆಲವೊಂದು ಊಹಾಪೋಹಗಳಿದ್ದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು.
ಮೃತರ ಪಾರತ್ರಿಕ ಮೋಕ್ಷಕ್ಕಾಗಿ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಯುನಿಟ್, ಸರ್ಕಲ್, ಝೋನ್ ಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :🖊️ ಯೂಸುಫ್ ಸಯೀದ್ ಪುತ್ತೂರು* (ಮಾಧ್ಯಮ ಕಾರ್ಯದರ್ಶಿ)
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ