ರಿಯಾದ್: ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಮೂಲದ ಮುಹಮ್ಮದ್ ಮುಸ್ತಫಾರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
14/10/2024ರಂದು ಹೃದಯಾಘಾತದಿಂದ ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷ ಬಾಷಾ ಗಂಗಾವಳಿ, ಮೃತರ ಸ್ಪೋನ್ಸರ್ ಶಂಸೀರ್ ಮಂಜೇಶ್ವರ, ಸಹೋದರ ಮುಹಮ್ಮದ್ ಮುಹ್ಸಿನ್, KMYAಯ ಅಝೀಝ್ ಕಾಟಿಪಳ್ಳ, ಸೈಫುಲ್ಲಾ ಕಾಟಿಪಳ್ಳ, ಊರಿನಲ್ಲಿ ಬೇಕಾದ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಮುಹಮ್ಮದ್ ಇಕ್ಬಾಲ್ ಸಹಕರಿಸಿದ್ದಾರೆ. ಪೂರಕವಾಗಿ ಕುಟುಂಬಸ್ಥರು ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.

ರಿಯಾದಿನ ಅಲ್ ರಾಜಿ ಮಸ್ಜಿದ್‌ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಗೆ ಮೃತದೇಹವನ್ನು ಕೊಂಡೊಯ್ಯಲಾಯಿತು.
ನಸೀಂನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ರಿಯಾದ್ ಝೋನ್ ಅಧ್ಯಕ್ಷರಾದ ಮುಸ್ತಫಾ ಸಅದಿ ವಹಿಸಿದ್ದರು ಹಾಗೂ ಕೆಸಿಎಫ್ ನಾಯಕರಾದ ಯೂಸುಫ್ ಹಾಜಿ ಕಳಂಜಿಬೈಲ್, ರಝಾಕ್ ಬಾರ್ಯ, ಖಲೀಲ್ ಝುಹ್ರಿ, KMYA ಯ ನಾಯಕರು, ಸದಸ್ಯರು ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು ಹಾಗೂ ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ