ಉಳ್ಳಾಲ :ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳ ದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ ಆಗಮಿಸಿದ್ದು, ಮೂವರ ಮೃತದೇಹ ವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮೂವರ ಮೃತದೇಹವನ್ನು ತಡರಾತ್ರಿ ಮೈಸೂರು ಗೆ ಕೊಂಡೊಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರು ಶನಿವಾರ ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನಲ್ಲಿ ತಂಗಿದ್ದರು. ರವಿವಾರ ರೆಸಾರ್ಟ್ ನ ಈಜು ಕೊಳದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿತ್ತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ