ಮಂಗಳೂರು : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮುಸ್ಲಿಂ ಸಮುದಾಯದ ವಕ್ಫ್ ಹಾಗೂ ಇನ್ನಿತರ ಅಲ್ಪಸಂಖ್ಯಾತ ವಿರೋಧಿ ನೀತಿ ವಿರುದ್ಧ ಕರ್ನಾಟಕ ರಾಜ್ಯ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ,ಎಸ್ ಎಂ ಎ ನೇತೃತ್ವದಲ್ಲಿ ಡಿಸೆಂಬರ್ 12 ಗುರುವಾರದಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಕ್ಫ್ ಜಾಗೃತಿ ಸಮಾವೇಶ
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸುನ್ನೀ ಸಂಘಟನೆಗಳ ವಿವಿಧ ಘಟಕಗಳಿಗೆ ರಾಜ್ಯ ಸಮಿತಿಗಳ ಜಂಟಿ ಕಾರ್ಯಕಾರಿ ಸಮಿತಿ ಸಭೆ ಕರೆ ನೀಡಿದೆ.
ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಯುನಿಟ್ ಸಮಿತಿಗಳು ತಮ್ಮ ಮೊಹಲ್ಲಾಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿಲು ಸೂಚಿಸಿದೆ.ಮಂಗಳೂರಿನಲ್ಲಿ ನಡೆದ ಕರ್ನಾಟಕ ಮುಸ್ಲಿಂ ಜಮಾಅತ್ ,ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಜಂಟಿ ಕಾರ್ಯಾಕಾರಿಣಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.