janadhvani

Kannada Online News Paper

ಮಂಜನಾಡಿ: ಗ್ಯಾಸ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ನಿಧನ

ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಕುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಕಳೆದ ಶನಿವಾರ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ದುರಂತ ಸಂಭವಿಸಿತ್ತು.

ಉಳ್ಳಾಲ: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಡಿ.7ರ ಶನಿವಾರ ತಡರಾತ್ರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಆಕಸ್ಮಿಕ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಡಿ. 12ರ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಕುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಕಳೆದ ಶನಿವಾರ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ದುರಂತ ಸಂಭವಿಸಿತ್ತು. ಇದರಿಂದ ಮನೆಯೊಡತಿ ಕುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝಾ ಗಂಭೀರ ಗಾಯಗೊಂಡಿದ್ದರು.

ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮನೆಯೊಡತಿ ಕುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

error: Content is protected !! Not allowed copy content from janadhvani.com