ಉಜ್ಜೈನ್: ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಈ ವೇಳೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳಿದ್ದಾರೆ.
ಇದೇ ವೇಳೆ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು.
ಈ ಕುರಿತು ಹರೀಶ್ ತಿವಾರಿ ಎಂಬವರು ಎಕ್ಸ್ ನಲ್ಲಿ ಮಾಡಿದ್ದ ಪೋಸ್ಟ್ ನ್ನು ಹಂಚಿಕೊಂಡ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ‘ನಿರ್ಭೀತ ಜಗದ್ಗುರು ‘ಎಂದು ಕರೆದಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಹಲವು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನವೆಂಬರ್ ನಲ್ಲಿ ಮೋದಿಯನ್ನು ‘ಸುಳ್ಳುಗಾರ’ ಎಂದು ಕರೆದಿದ್ದ ಸ್ವಾಮಿ, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಪಡುವುದಾಗಿ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ