ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.ಈ ಕುರಿತಂತೆ ಕೇಂದ್ರ ಸರ್ಕಾರ ತುರ್ತು ಆದೇಶ ಹೊರಡಿಸಿದ್ದು, ದೇಶದಾದ್ಯಂತ ಏಳು ದಿನಗಳ ಕಾಲ ಶೋಕಚರಣೆ ಘೋಷಿಸಿದೆ.ಇನ್ನು ನಾಳೆ ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ದೇಶದ ಎಲ್ಲ ಭಾಗಗಳಿಗೆ ಇದು ಅನ್ವಯವಾಗುತ್ತದೆ.