janadhvani

Kannada Online News Paper

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್: ಸದಸ್ಯತ್ವ ಮತ್ತು ಆಯ್ಕೆ ಪ್ರಕ್ರಿಯೆ ಮಾಹಿತಿ ಕಾರ್ಯಾಗಾರ

ಪುತ್ತೂರು : ನೂತನ ಸಾಂಘಿಕ ವರ್ಷದ ಸದಸ್ಯತ್ವ ಮತ್ತು ಘಟಕಗಳ ಪುನರ್ರಚನೆ ಆಯ್ಕೆ ಪ್ರಕ್ರಿಯೆಯ ಮಾಹಿತಿ ಕಾರ್ಯಾಗಾರ ದಿನಾಂಕ 26.12.2024 ಗುರುವಾರದಂದು ಕೆಎಂಜೆ ಹಳೆಯ ಕಛೇರಿ ಪುತ್ತೂರಿನಲ್ಲಿ ನಡೆಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಝೋನ್ ಅಧ್ಯಕ್ಷರಾದ ಕೆ ಬಿ ಕಾಸಿಂ ಹಾಜಿ ಮಿತ್ತೂರುರವರು ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಜೀವಾಳ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಮೌಲನಾ ಜಿ. ಎಂ. ಕಾಮಿಲ್ ಸಖಾಫಿರವರು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಝೋನ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬಪ್ಪಳಿಗೆ ಪ್ರಾಸ್ತಾವಿಕ ಮಾತನ್ನಾಡಿದರು. ಪುತ್ತೂರು ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಅಬ್ದುಲ್ ಜಲೀಲ್ ಸಖಾಫಿ ಜಾಲ್ಸೂರು, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಯೂಸುಫ್ ಸಯೀದ್ ಪುತ್ತೂರು, ಪುತ್ತೂರು ಝೋನ್ ಕೋಶಾಧಿಕಾರಿ ಅಬ್ದುಲ್ ಕರೀಂ ಹಾಜಿ ಚೆನ್ನಾರ್‌ರವರು ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸುನ್ನಿ ಮದ್ರಸ ಅಸೋಸಿಯೇಷನ್ ದಕ್ಷಿಣ ಕನ್ನಡ ಸೌತ್ ಜಿಲ್ಲಾಧ್ಯಕ್ಷರಾದ ಯೂಸುಫ್ ಹಾಜಿ ಸಾಜ, ಎಸ್‌ವೈಎಸ್ ಪುತ್ತೂರು ಝೋನ್ ಅಧ್ಯಕ್ಷರಾದ ಅಬೂಶಝಾ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಾದ ಆದಂ ಹಾಜಿ ಪಡೀಲ್, ಇಸ್ಮಾಯಿಲ್ ಹಾಜಿ ಬನ್ನೂರು, ಇಸ್ಮಾಯಿಲ್ ಹಾಜಿ ಕೊಂಬಾಳಿ, ಇಸ್ಮಾಯಿಲ್ ಹಾಜಿ ಹಸನ್ ನಗರ, ಯೂಸುಫ್ ಹಾಜಿ ಸೂರಿಕುಮೇರ್ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು ಝೋನ್ ವ್ಯಾಪ್ತಿಯ ಸರ್ಕಲ್, ಯುನಿಟ್ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸದಸ್ಯರಾದ ಅಬ್ದುಲ್ಲಾ ಉಸ್ತಾದ್ ಬನ್ನೂರವರು ಸ್ವಾಗತಿಸಿದರು. ಉಸ್ಮಾನ್ ಮುಸ್ಲಿಯಾರ್ ಕುಂಬ್ರರವರು ಧನ್ಯವಾದಗೈದರು.

ವರದಿ : ಅಬೂಸೈಹಾನ್
26.12.2024