janadhvani

Kannada Online News Paper

ದೇಶದಲ್ಲಿ ಮೊದಲ HMPV ವೈರಸ್ ಕರ್ನಾಟಕದಲ್ಲಿ ಪತ್ತೆ- 8 ತಿಂಗಳ ಮಗುವಿನಲ್ಲಿ ಸೋಂಕು ದೃಢ

ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ ಮತ್ತೆ ಸೋಂಕು ಹೇಗೆ ಹರಡಿದೆ ಎಂಬುದು ಸ್ಪಷ್ಟವಾಗಿಲ್ಲ.

ಬೆಂಗಳೂರು, ಜ.06: ಕೊರೋನಾ ವೈರಸ್‌ ಗಿಂತಲೂ ವಿಭಿನ್ನವಾಗಿರುವ HMPV ವೈರಸ್ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಕೇಸ್‌ ಪತ್ತೆಯಾಗಿದೆ.

ಬೆಂಗಳೂರಿನ 8 ತಿಂಗಳ ಮಗುವಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್‌ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಮಾಹಿತಿ ನೀಡಿದ್ದಾರೆ.

ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ತಿಳಿಸಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ ಮತ್ತೆ ಸೋಂಕು ಹೇಗೆ ಹರಡಿದೆ ಎಂಬುದು ಸ್ಪಷ್ಟವಾಗಿಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ಅವರು ತಿಳಿಸಿದ್ದಾರೆ.

error: Content is protected !! Not allowed copy content from janadhvani.com