ಮಂಗಳೂರು: ಇಲ್ಲಿನ ಹೊರವಲಯದ ಕೆ.ಸಿ.ರೋಡ್ ನಲ್ಲಿ ಕೋಟೆಕಾರ್ ಸಹಕಾರಿ ಸಂಘದ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಗಳನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಸುಮಾರು 12 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದರೋಡೆ ನಡೆಸಿದ್ದರು.
ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುನಲ್ವೇಲಿ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗು ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಸ್ಥಳೀಯರ ಕೈವಾಡ ಅಥವಾ ಸಹಕಾರದ ಬಗ್ಗೆ ಸಂದೇಹವಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ಇನ್ನಷ್ಟು ಮಾಹಿತಿಗಳನ್ನು ಪಡೆಯಲಾಗುವುದು ಎಂದು ಅವರು ತಿಳಿಸಿದರು.