ರಿಯಾದ್ :ಅಲ್ ರಾಸ್ ನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಸಯ್ಯಿದ್ ಫೈರೋಝ್ ರವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಚಿಕಿತ್ಸೆ ಫಲಿಸದೆ 15/01/2025ರಂದು ಮರಣ ಹೊಂದಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಅಲ್ ಕಸೀಮ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆ ಅಧ್ಯಕ್ಷರಾದ ಭಾಷಾ ಗಂಗಾವಳಿ ಅಲ್ ಕಸೀಮ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ತಾಜುದ್ದೀನ್ ಕೆಮ್ಮಾರ, ಫೈಝಲ್ ಮಠ ಸೆಕ್ಟರ್ ನಾಯಕರಾದ ರಶೀದ್ ಬೆಳ್ಳಾರೆ ಯೂಸುಫ್ ಉಚ್ಚಿಲ ಮೃತರ ಕುಟುಂಬಸ್ಥರಾದ ಸಲಾಂ ಹಳೆಯಂಗಡಿ ರಿಯಾದ್, ಮಜೀದ್ , ರಿಯಾದ್ ಮುಖ್ತಾರ್ ಹಳೆಯಂಗಡಿ , ಮುಹ್ಯುದ್ದೀನ್ ಶಿವಮೊಗ್ಗ, ಹನೀಫ್ ಶಿವಮೊಗ್ಗ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಕುಟುಂಬಸ್ಥರು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.
ಅಲ್ ರಾಸ್ ಅಶ್ಶಾಯಿ ನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ಅಲ್ ಕಸೀಮ್ ಝೋನ್ ದಾಯಿಯಾದ ಯಾಕೂಬ್ ಸಖಾಫಿ ವಹಿಸಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ