janadhvani

Kannada Online News Paper

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಪೆರಾಜೆ ಅಲ್ ಅಮೀನ್ ಚಾರಿಚೇಬಲ್ ಟ್ರಸ್ಟ್ ನ ಅಧ್ಯಕ್ಷ ಉನೈಸ್ ಪೆರಾಜೆ,ಅಶ್ರಫ್ ಕುಂಬ್ರ, ಮಜೀದ್ ಭಾಗಮಂಡಲ, ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಮಾತನಾಡಿದ ಮಹಮ್ಮದ್ ಕುಕ್ಕುವಳ್ಳಿ ತಾಜುದ್ಧೀನ್ ಅರಂತೋಡು ವಿಖಾಯ ತಂಡದ ಸದಸ್ಯನಾಗಿ ಈ ಭಾಗದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಮತ್ತು 2018ರ ಜೋಡುಪಾಲ ನೆರೆ ಸಂಧರ್ಭದಲ್ಲಿನ ಸೇವೆಯನ್ನು ಸ್ಮರಿಸಿದರು.ಅಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಪತ್ಭಾಂದವ ಪ್ರಶಸ್ತಿ ನೀಡಿ ಗೌರವಿಸಿದನ್ನು ಅವರು ನೆನಪಿಸಿಕೊಂಡರು .

error: Content is protected !! Not allowed copy content from janadhvani.com