ಸಂಪಾಜೆ : ಮುಹಿಯುದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಮತ್ತು ಹಯಾತುಲ್ ಇಸ್ಲಾಂ ಮದರಸ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಆಲಿ ಹಾಜಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸದರ್ ಮುಅಲ್ಲಿಂ ಸಈದ್ ಫೈಝಿಯವರು ಸ್ವಾಗತಿಸಿದರು. ಕಲ್ಲುಗುಂಡಿ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ದಾರಿಮಿ ಮುಖ್ಯ ಭಾಷಣ ನಡೆಸಿ ಗಣರಜ್ಯೋತ್ಸವದ ಮಹತ್ವದ ಬಗ್ಗೆ, ದೇಶ ಪ್ರೇಮದ ದೇಶದೊಂದಿಗೆ ಮುಸ್ಲಿಂ ಸಮುದಾಯದ ಸೇವೆಯ ಬಗ್ಗೆ ತಿಳಿಸಿ ಸಮುದಾಯ ದೇಶಕ್ಕಾಗಿ ಹೆಚ್ಚು ಕ್ರಿಯಾಶೀಲರಾಗಿ ದುಡಿಯುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿ ದೇಶದ ಒಳಿತಿಗೆ ಪ್ರಾರ್ಥಿಸಿದರು.
PWD ಕಾಂಟ್ರಾಕ್ಟರ್ ಅಶ್ರಫ್ ಬಾಲಂಬಿ ಶುಭ ಹಾರೈಸಿ ಮಾತನಾಡಿದರು, ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಮಸೀದಿ ಪ್ರಧಾನ ಕಾರ್ಯದರ್ಶಿ ಪಿ. ಎಮ್ ಮುಹಮ್ಮದ್ ಇರ್ಷಾದ್, ಉಪಾಧ್ಯಕ್ಷರು ಅಶ್ರಫ್ ಕೆ ಎಮ್ , ಕೋಶಾಧಿಕಾರಿ ಅಬೂಬಕ್ಕರ್ ಸೂಪರ್, ಜೊತೆ ಕಾರ್ಯದರ್ಶಿ ಹನೀಫ್ ಚಟ್ಟೆಕಲ್ ಮತ್ತು ರಫೀಕ್ ಕೆ ಎಮ್, ಇಬ್ರಾಹಿಂ ಏ ಕೆ ,ಅಬ್ದುಲ್ಲ ಹಾಜಿ ಹಾನೆಸ್ಟ್ , ರಜಾಕ್ ಸೂಪರ್ ಹಾಗೂ ಸಹ ಅಧ್ಯಾಪಕರಾದ ಸಾಜಿದ್ ಅಝ್ಹರಿ , ಮತ್ತು ಮದ್ರಸಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಹಮ್ಮದ್ ಆರಿಫ್ ಫೈಝಿ ಅಲ್ ಮಅಬರಿಯವರು ಗಣರಾಜ್ಯೋತ್ಸವದ ಶುಭಾಶಯ ತಿಳಿಸಿ ವಂದಿಸಿದರು.ಸಿಹಿ ತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ