ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಸಮಾರಂಭವು ಜನವರಿ 24 ರಂದು ಆರಂಭಗೊಂಡಿದ್ದು, ಗುರುವಾರದಂದು (ಜನವರಿ 30) ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ.ಅಬೂಬಕರ್ ಮುಸ್ಲಿಯಾರ್ ಆಶೀರ್ವಚನ ನೀಡಲಿದ್ದಾರೆ.
ಸಯ್ಯಿದ್ ಕೆ.ಪಿ.ಎಸ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಬೃಹತ್ ದ್ಸಿಕ್ರ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆಸಿರೋಡ್ ಮುಖ್ಯ ಭಾಷಣ ಮಾಡಲಿದ್ದಾರೆ.
ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಫಝಲ್ ಜಮಲುಲ್ಲೈಲಿ ತಂಙಳ್ ಸಬರಬೈಲು, ಎಂ.ಎಸ್ ಕೋಯ ತಂಙಳ್ ಉಜಿರೆ, ಅಬ್ಬಾಸ್ ಸಅದಿ ಪೆರ್ನೆ, ಅಬೂಸ್ವಾಲಿಹ್ ಮುಸ್ಲಿಯಾರ್ ಕಿಲ್ಲೂರು, ಉಮರ್ ಸಖಾಫಿ ಕಾಜೂರು, ಶಂಸೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಮುಂತಾದವರು ಭಾಗವಹಿಸಲಿದ್ದಾರೆಂದು ಉರೂಸ್ ಸಮಿತಿ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.