ದುಬೈ: ಯುಎಇಯಲ್ಲಿ ಇಂದು ತಾಪಮಾನ ಕಡಿಮೆಯಾಗಲಿದ್ದು, ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ರಾತ್ರಿ ತೇವವಾಗಿರಲಿದೆ. ಶನಿವಾರ ಬೆಳಗ್ಗೆಯೂ ಮಂಜು ಕವಿಯುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 22 ರಿಂದ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 13 ರಿಂದ 18 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗಲಿದೆ.
ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಗಾಳಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಧೂಳಿನ ಕಣಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ನಾಗರಿಕರು ಮತ್ತು ನಿವಾಸಿಗಳು ಜಾಗರೂಕರಾಗಿರಲು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.