ಕಲಬುರಗಿ : ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡೋಕೆ ಹೋಗಿ ಬಿಡ್ತಾರೆ. ಇದೇನು ಹೊಸದಲ್ಲ, ನನ್ನ ಬಳಿ ವಿಡಿಯೋ ಇವೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷ ತುಂಬುತ್ತಿದೆ. ಹಾಗಾಗಿ ಅವರೇ ಈ ರೀತಿ ಮಾಡ್ತಾರೆ. ಆರ್ ಎಸ್ ಎಸ್ ವರ ಎಲ್ಲಾ ಚಿಂತನೆಗಳನ್ನು ಅನುಷ್ಟಾನಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ನನ್ನ ಹತ್ರ ವಿಡಿಯೋ ಇದೆ. ಶಾಂತಿ ಕದಡುವ ಯತ್ನವನ್ನು ಅವರೇ ಮಾಡ್ತಿದ್ದಾರೆ. ಎಲ್ಲಾ ಕಡೆ ಶಾಂತಿ ಕದಡಿಸಲು ಪ್ರಯತ್ನ ಮಾಡ್ತಿದ್ದಾರೆ. ವಿಜಯಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದವನು ಸಂಘ ಪರಿವಾರದವನು ಎಂದರು.
‘ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತಾ ಹೇಳಿದ್ದೇವೆ. ಯಾರೇ ಆಗಲಿ ಯಾವುದೇ ಧರ್ಮ ಜಾತಿ ಭಾಷೆ ಹೆಸರಲ್ಲಿ ಶಾಂತಿ ಕದಡಿದ್ರೆ ಕಾನೂನಿನ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನು ಗೃಹ ಸಚಿವರಿಗೆ ಹೇಳೋದು ಇಷ್ಟೆ. ಶಾಂತಿ ಕದಡಲು ಬಹಳ ಪ್ರಯತ್ನ ಮಾಡ್ತಿದ್ದಾರೆ. ಬಿಜೆಪಿ ಅಧಿಕಾರ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣ ಶೇ. 90 ರಷ್ಟು ಎರಡೇ ತಿಂಗಳಲ್ಲಿ ಕಮ್ಮಿ ಆಗಿದೆ. ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯಗಳು’ ಎಂದು ಆರೋಪಿಸಿದರು.
ಇದೆ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು, ಮಂತ್ರಿಗಳ ಬದಲಾವಣೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗ ಕಲಬುರಗಿಯಲ್ಲೆ ಇದೆ. ಅವರು ಬಂದಾಗ ಕೇಳಿ. ಸರ್ಕಾರ ಬಂದಾಗಿನಿಂದಲೂ ಈ ರೀತಿಯ ಎಲ್ಲಾ ಚರ್ಚೆ ಆಗ್ತಿದೆ. ರಾಜಕೀಯದಲ್ಲಿ ಇವೆಲ್ಲಾ ಚರ್ಚೆಗಳು ನಡೆಯುತ್ತಲೆ ಇರುತ್ತೆ. ನನ್ನ ವಿಚಾರದಲ್ಲಿ ಯಾವ ಶ್ರೀಗಳು ಮಾತಾಡಬಾರದು. ಅದರಲ್ಲೂ ರಾಜಕೀಯವಂತೂ ಸ್ವಾಮೀಜಿಗಳು ಮಾತಾಡಲೇಬಾರದು ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ