ಹಾವೇರಿ: ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರ ಅಕ್ರಮ ಬಂಧನದ ವಿರುದ್ಧ ಹಾವೇರಿ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಬಂಕಾಪುರ್ ಪಟ್ಟಣದಲ್ಲಿ ನಿನ್ನೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಹಮ್ಮದ್ ಶರೀಫ್, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿ SDPI ರಾಷ್ಟ್ರೀಯ ಅಧ್ಯಕ್ಷ MK ಫೈಝಿ ಅವರನ್ನು ಬಂಧಿಸುವ ಮೂಲಕ,ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶವಿರೋಧಿ ನಡೆಯನ್ನು ಮತ್ತೆ ಮುಂದುವರಿಸಿದೆ, ‘ಭಾರತ ಈಗಲೂ ಪ್ರಜಾಸತ್ತಾತ್ಮಕ ದೇಶ ಎಂಬುದನ್ನು ಪ್ರಧಾನಿಗಳು ಹೇಗೆ ವಿದೇಶಗಳ ಮುಂದೆ ಭಾಷಣ ಬಿಗಿಯುತ್ತಿದ್ದಾರೆ ಎಂಬ ಪ್ರಶ್ನೆ ಮೂಡುತ್ತಿದೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ಅಸ್ಪಷ್ಟ ದುರ್ಬಳಕೆಯು ಸರ್ಕಾರವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ.
ಈ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡ ಬಂಧಿಸಿರುವ ವಿಪಕ್ಷಗಳ ರಾಜಕಾರಣಿಗಳನ್ನು ಸುದೀರ್ಘವಾಗಿ ವಿಚಾರಣೆ ನಡೆಸಿದರೂ ಅವರ ವಿರುದ್ಧ ಅಕ್ರಮ ಎಸಗಿರುವ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಅದಾಗ್ಯೂ ಅವರನ್ನು ಬಂಧನ ಮಾಡಲಾಗಿದೆ.
2014ರಿಂದ ನಿಮ್ಮ ಆಡಳಿತದ ಅವಧಿಯಲ್ಲಿ ತನಿಖಾ ಸಂಸ್ಥೆಗಳು ಎಫ್‌ಐಆರ್ ದಾಖಲಿಸಿರೋದು, ಬಂಧನ ಮಾಡಿರೋದು, ದಾಳಿ ಮಾಡಿರೋದು, ವಿಚಾರಣೆಗೆ ಒಳಪಡಿಸಿರುವ ಒಟ್ಟು ರಾಜಕಾರಣಿಗಳ ಪೈಕಿ ಬಹುತೇಕರು ವಿಪಕ್ಷಗಳಿಗೆ ಸೇರಿದವರಾಗಿದ್ದಾರೆ. ಅಚ್ಚರಿಯ ವಿಷಯ ಅಂದ್ರೆ ಬಿಜೆಪಿಗೆ ಸೇರುವ ವಿಪಕ್ಷದ ನಾಯಕರ ವಿರುದ್ಧ ತನಿಖೆ ಮಾಡಲು ತನಿಖಾ ಸಂಸ್ಥೆಗಳು ಮುಂದಾಗೋದಿಲ್ಲ.
ಇನ್ನು ‘ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಅವರ ವಿರುದ್ಧ 2014, 2015ರಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಆದರೆ ಅವರು ಬಿಜೆಪಿಗೆ ಸೇರಿದ ನಂತರ ಈ ಪ್ರಕರಣ ಮೂಲೆಗುಂಪಾಗಿದೆ. ‘ಮಾಜಿ ಟಿಎಂಸಿ (ತೃಣಮೂಲ ಕಾಂಗ್ರೆಸ್) ನಾಯಕರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರ ವಿರುದ್ಧದ ಹಗರಣ ಆರೋಪದಲ್ಲಿ ಇ.ಡಿ ಮತ್ತು ಸಿಬಿಐ ವಿಚಾರಣೆಗೆ ಮುಂದಾಗಿತ್ತು. ಆದರೆ ಅವರು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರಿದ ನಂತರ ಆ ಪ್ರಕರಣವೂ ಹಳ್ಳ ಹಿಡಿದಿರುವ ವಿಚಾರಗಳು ಬಿಜೆಪಿ ರಾಜಕೀಯ ದ್ವೇಷ ಸಾಧನೆಯ ಭಾಗವಾಗಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸುತ್ತಿರುವುದಕ್ಕೆ ಇರುವ ಉದಾಹರಣೆಯಾಗಿದೆ ಎಂದರು.
ತದನಂತರ ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಇವರು ಇದರ ಮುಂದಿವರಿದ ಭಾಗವಾಗಿ ದೇಶದಲ್ಲಿ ವಕ್ಫ್ ಮಸೂದೆ ವಿರುದ್ಧ ಶಕ್ತವಾದ ಹೋರಾಟ ದೇಶಾದ್ಯಂತ SDPI ನೇತೃತ್ವದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಕೇಂದ್ರ ಮೋದಿ ಸರ್ಕಾರ ಪಕ್ಷದ ರಾಷ್ಟೀಯ ಅಧ್ಯಕ್ಷರನ್ನು ED ಯ ಮೂಲಕ ಅಕ್ರಮವಾಗಿ ಬಂಧಿಸಿದೆ. ಈ ಬಂಧನವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ನಡೆಯಾಗಿದ್ದು ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ಮೂಲಕ ಖಂಡಿಸುತ್ತದೆ. ಕೇಂದ್ರ ಸರ್ಕಾರ ತನ್ನ ಜನ ವಿರೋಧಿ ನಡೆಯಿಂದ ಹಿಂದೆ ಸರಿದು ಕೂಡಲೇ MK ಫೈಝಿ ಅವರನ್ನು ಬಿಡುಗಡೆ ಮಾಡಬೇಕು ಎಂದು ತಾಕೀತು ಮಾಡುತ್ತಿದ್ದೇವೆ. ಒಂದು ವೇಳೆ ಇದೇ ರೀತಿ ಮುಂದುವರಿದರೆ ಈ ಪ್ರತಿಭಟನೆ ಇನ್ನಷ್ಟು ಶಕ್ತಗೊಳ್ಳಲಿದೆ ಎಂಬ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಇರ್ಷಾದ್ ಮಸನಕಟ್ಟಿ, ಮತ್ತು ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಮೌಲಾಅಲಿ, ಹಾಗೂ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಸಮಿತಿ ಸದ್ಯಸರು ಮತ್ತು ಬಂಕಾಪುರ್ ಪಟ್ಟಣದ ಎಲ್ಲಾ ಸದ್ಯಸರು ಉಪಸ್ಥಿತರಿದ್ದರು.