ಕೆಸಿಎಫ್ ಹಿತೈಷಿ ಫಾರೂಖ್ ಉಳ್ಳಾಲ (AL-HAQEEQ TRADERS) ಇವರ ಪತ್ನಿ ಖಮರುನ್ನಿಸಾ ಉಳ್ಳಾಲ ರವರು ದಿನಾಂಕ 25/03/2025 ರಂದು ಜಿದ್ದಾದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ಜಿದ್ದಾದ ಬಲದ್ ನಲ್ಲಿರುವ ಅಲ್ ಅಸದ್ ಖಬರ್ ಸ್ಥಾನದಲ್ಲಿ ಕೆಸಿಎಫ್ ಶರಫಿಯ್ಯಾ ಸೆಕ್ಟರ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

ಅಂತ್ಯಕ್ರಿಯೆಗೆ ಬೇಕಾದ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳು ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ಶರಫಿಯ್ಯಾ ಸೆಕ್ಟರ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಫಾರೂಖ್ ಬಂಟ್ವಾಳ ಮತ್ತು ನಾಸಿರ್ ಹೆಚ್ಕಲ್, ಮುಹಮ್ಮದ್ ಹಾಜಿ ಕುಕ್ಕಾಜೆ ಸಹಿತ ಅನೇಕ ನಾಯಕರು ಸಹಕರಿಸಿದರು.
ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ಮಸೀದಿಯಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿ ಅಲ್ ಅಸದ್ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.ಈ ಸಂದರ್ಭಲ್ಲಿ ಮೃತರ ಕುಟುಂಬಸ್ಥರು ಹಾಗೂ ಹಲವಾರು ಕಾರ್ಯಕರ್ತರು, ಸ್ಥಳೀಯರು ದಫನ ಕಾರ್ಯದಲ್ಲಿ ಸಹಕರಿಸಿದರು. ಮೃತರು ಒಂದು ಹೆಣ್ಣು, ಒಂದು ಗಂಡು, ಪತಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ