janadhvani

Kannada Online News Paper

ದ್ವಿತೀಯ ಪಿಯುಸಿ ಪರೀಕ್ಷೆ: ಫಾತಿಮಾ ಸುಜೈಫಾ ಫರಹಾಳಿಗೆ ಡಿಸ್ಟಿಂಕ್ಷನ್

ಮಂಗಳೂರು:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೋರಿಯಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಸುಜೈಫಾ ಫರಹ 524 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಕೃಷ್ಣಾಪುರ ನಿವಾಸಿ ಮೊಹಮ್ಮದ್ ಶಮೀರ್ ಮತ್ತು ಫಾತಿಮಾ ದಂಪತಿಯ ಪುತ್ರಿ . ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.