ಮಂಗಳೂರು: ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಸಂವಿಧಾನಿಕವಾಗಿ ಸಮುದಾಯವನ್ನು ಒಗ್ಗೂಡಿಸಿ ಹೋರಾಡಲು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ಏಪ್ರಿಲ್ 18, ಶುಕ್ರವಾರ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆ ಅಧ್ಯಕ್ಷತೆ ವಹಿಸಿದ ಕಣ್ಣೂರು ಸುನ್ನೀ ಸಂಟರಿನಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಮುಸಲ್ಮಾನರ ಕೋಟ್ಯಾಂತರ ವಕ್ಫ್ ಆಸ್ತಿಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರಕಾರ ಮುಸಲ್ಮಾನರನ್ನು ಕಬಳಿಸುವ ಹುನ್ನಾರವನ್ನು ಹೊಂದಿದೆ. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರತಿಯೊಬ್ಬ ಭಾರತೀಯನು ತಿರಸ್ಕರಿಸಬೇಕಾಗಿದೆ , ಈ ಕುರಿತು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ಕರೆ ನೀಡಿರುವ ಬೃಹತ್ ಪ್ರತಿಭಟನೆಯನ್ನು ದ.ಕ ಜಿಲ್ಲಾ ವ್ಯಾಪ್ತಿಯ ಪ್ರತಿಯೊಂದು ಯುನಿಟ್‌ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸದಸ್ಯರು ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ