ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವವರು ಸಾವಿಗೀಡಾಗಿದ್ದಾರೆ. ಹಲವು ಕನ್ನಡಿಗರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ತುರ್ತು ಸಭೆ ಕರೆದಿರುವುದಾಗಿ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಹಿತಿ ನೀಡಲಾಗಿದೆ.
“ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು ” ಎಂದು ಸಿಎಂ ಮಾಧ್ಯಮ ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2-30 ಸುಮಾರಿಗೆ ಉಗ್ರರ ದಾಳಿ ನಡೆದ ಸಂದರ್ಭದಲ್ಲಿ ಅನೇಕ ಪ್ರವಾಸಿಗರು ಕುದುರೆಯ ಮೇಲೇರಿ, ಆ ವಿಶಾಲವಾದ ಗಿರಿಧಾಮದಲ್ಲಿರುವ ಹುಲ್ಲುಗಾವಲಿನ ಸೌಂದರ್ಯವನ್ನು ಸವಿಯುತ್ತಿದ್ದರು. ಆಗಲೇ ಮೂರ್ನಾಲ್ಕು ಉಗ್ರರು ರೈಫಲ್ ಗಳನ್ನು ಹಿಡಿದು ಬಂದರು. ಅವರು ಸೇನಾ ಸಮವಸ್ತ್ರ ಧರಿಸಿದ್ದರಿಂದ ಅವರು ಭಾರತೀಯ ಸೈನಿಕರು ಇರಬಹುದು, ಏನನ್ನೋ ಕೇಳಲು ಬಂದಿರಬಹುದು ಎಂದು ಕೊಂಡಿದ್ದೆವು ಎಂದು ಘಟನೆಯಲ್ಲಿ ಪಾರಾದವರು ಹೇಳಿದ್ದಾರೆ.
ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 26 ಮಂದಿ ಬಲಿಯಾಗಿದ್ದಾರೆ. ಗಂಭೀರವಾದ ಗಾಯಗಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ, ಆದರೂ ಸರ್ಕಾರದಿಂದ ಇನ್ನೂ ಅಧಿಕೃತ ಸಾವುನೋವುಗಳ ಮಾಹಿತಿ ಲಭ್ಯವಾಗಿಲ್ಲ. ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಸದ್ಯ ಭದ್ರತಾ ಪಡೆಗಳು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಶಿವಮೊಗ್ಗದಿಂದ ಉದ್ಯಮಿ ಮಂಜುನಾಥ್‌ರಾವ್ ಏಪ್ರಿಲ್ 19ರಂದು ಪತ್ನಿ ಪಲ್ಲವಿ ಮತ್ತು ಪುತ್ರನ ಜೊತೆಗೆ ಪ್ರವಾಸ ಕೈಗೊಂಡಿದ್ದರು. ಇವರ ಜೊತೆ ಸಾಗರದ ತಂಡ ಇತ್ತು. ಉದ್ಯಮಿ ಮಂಜುನಾಥ್‌ರಾವ್ ಅವರ ಪುತ್ರ ಅಭಿಜಯ ಇತ್ತೀಚೆಗೆ ಪ್ರಕಟವಾದ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಶೇಕಡಾ 97ರಷ್ಟು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದನು. ಪುತ್ರನ ಸಾಧನೆಯನ್ನು ಸಂಭ್ರಮಿಸಲು ಅವರು ಕಾಶ್ಮೀರ ಪ್ರವಾಸದ ಯೋಜನೆ ಹಾಕಿದ್ದರು ಎನ್ನಲಾಗಿದೆ.
ಕುಟುಂಬವು ಕಾಶ್ಮೀರದ ಪೆಹಲ್‌ಗಾಂವ್‌ನ ಮಾರುಕಟ್ಟೆಗೆ ಹೋದಾಗ ಉಗ್ರನು ಮಂಜುನಾಥ್ ಮೇಲೆ ಗುಂಡು ಹಾರಿಸಿದ್ದಾನೆ. ಜೊತೆಗೆ, ಪತ್ನಿ ಪಲ್ಲವಿ ಹಾಗೂ ಮಗ ಅಭಿಜಯ ಇದ್ದರು. ಇಬ್ಬರನ್ನು ಬಿಟ್ಟು ಆತ ಉದ್ಯಮಿ ಮೇಲೆ ಮಾತ್ರ ಗುಂಡಿನ ದಾಳಿ ಮಾಡಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್