ನವದೆಹಲಿ: ಪಾಸ್ಪೋರ್ಟ್ ಕಚೇರಿಗೆ ಹೋಗದೆಯೇ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವುದಕ್ಕಾಗಿ mPassportSeva ಆ್ಯಪ್ಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.
ದೆಹಲಿಯಲ್ಲಿ ನೆಲೆಸಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಈ ಆ್ಯಪ್ ಮೂಲಕ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಯ ವ್ಯಾಪ್ತಿಯಲ್ಲಿರುವ ಪಾಸ್ಪೋರ್ಟ್ ಸೇವಾ ಕೇಂದ್ರ ಅಥವಾ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಹುಬ್ಬಳ್ಳಿ ಅಥವಾ ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಪೊಲೀಸ್ ಪರಿಶೀಲನೆ ಅಗತ್ಯ ಇದ್ದರೆ ಅದು ಹುಬ್ಬಳ್ಳಿಯಲ್ಲಿ ನಡೆಯುತ್ತದೆ. ಅದಾದ ಬಳಿಕ, ಪಾಸ್ಪೋರ್ಟನ್ನು ಅರ್ಜಿದಾರರು ನೀಡಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುತ್ತದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಆ್ಯಪ್ಗೆ ಚಾಲನೆ ನೀಡಿದರು. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪಾಸ್ಪೋರ್ಟ್ ಕಚೇರಿ ಸ್ಥಾಪಿಸುವ ಗುರಿ ಇದೆ ಎಂದು ಅವರು ಹೇಳಿದರು.
ಪಾಸ್ಪೋರ್ಟ್ ಸೇವಾ ದಿನಾಚರಣೆ ಅಂಗವಾಗಿ ಈ ಆ್ಯಪ್ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಆ್ಯಪ್ ಅಂಡ್ರಾಯ್ಡ್ ಮತ್ತು iOS ಫ್ಲಾಟ್ಫಾರ್ಮ್ ನಲ್ಲಿ ಲಭ್ಯವಿದೆ.
ಮೊಬೈಲ್ ಆ್ಯಪ್ ನ ವೈಶಿಷ್ಟ್ಯ ಹೀಗಿದೆ




















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ