ರಿಯಾದ್: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟಿದ್ದು,ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಭಾರತೀಯರು, ಬಾಂಗ್ಲಾದೇಶೀಯರು ಮತ್ತು ಪಾಕಿಸ್ತಾನೀಯರು ಸೇರಿದ್ದಾರೆ. ಮೃತಪಟ್ಟ ಭಾರತೀಯನನ್ನು 25 ವರ್ಷದ ಅಬಿದ್ ಅನ್ಸಾರಿ ಎಂದು ಗುರುತಿಸಲಾಗಿದೆ.
ಜುಬೈಲ್ ಇಂಡಸ್ಟ್ರಿಯಲ್ ಏರಿಯಾ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ರಿಯಾಸ್ ಎಂಜಿಎಲ್ ಯೋಜನೆಯ ಉದ್ಯೋಗಿಗಳಾಗಿದ್ದಾರೆ. ಇವರನ್ನು ಸಾಗಿಸುತ್ತಿದ್ದ ಬಸ್ ಗೆ ಡ್ರಂ ಟ್ರಕ್ ಡಿಕ್ಕಿ ಹೊಡೆದು ಅದರಲ್ಲಿರುವ ಲೋಡ್ ಬಸ್ ನ ಮೇಲೆ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ಟ್ರಕ್ ಮಗುಚಿ ಬಿದ್ದಿದೆ.
ಗಾಯಗೊಂಡ ಏಳು ಜನರನ್ನು ಜುಬೈಲ್ ಅಲ್ ಮನಾ ಆಸ್ಪತ್ರೆ ಮತ್ತು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮೃತದೇಹಗಳನ್ನು ಸಫಾ ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ