ಕೊಪ್ಪಳ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿವಿಧ ಸಂಘಟನೆಗಳು ತೀವ್ರ ದುಃಖವನ್ನು ವ್ಯಕ್ತಪಡಿಸಿದೆ.
ಜನಪರ ಸಂಘಟನೆಗಳ ಒಕ್ಕೂಟ ಜಿಲ್ಲಾ ಅಧ್ಯಕ್ಷ ಎಸ್.ಎ.ಗಫಾರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಮುದುಕಪ್ಪ ಹೊಸಮನಿ, ಜಮಿಯತ್ ಉಲಮಾ-ಎ-ಹಿಂದ್ ಮುಖಂಡ ಮುನೀರ್ ಅಹ್ಮದ್ ಸಿದ್ದೀಕಿ, ಮೊಹಮ್ಮದ್ ಕಿರ್ಮಾನಿ ಖಾಝಿ, ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಮುಖಂಡ ಗೌಸ್ ನೀಲಿ ಮುಂತಾದವರು ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.
28 ಅಮಾಯಕ ಪ್ರವಾಸಿಗರನ್ನು ಕ್ರೂರವಾಗಿ ಹತ್ಯೆ ಮಾಡಿರುವುದು ಅಮಾನವೀಯ ಕೃತ್ಯವಾಗಿದ್ದು, ಇದನ್ನು ಯಾವುದೇ ಧರ್ಮಕ್ಕೆ ಜೋಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅದನ್ನು ಇಸ್ಲಾಂನೊಂದಿಗೆ ಜೋಡಿಸಲು ಪ್ರಯತ್ನಿಸುತ್ತಿರುವವರು ಇಸ್ಲಾಂನ ನಿಜವಾದ ಬೋಧನೆಗಳ ಬಗ್ಗೆ ಅಜ್ಞಾನಿಗಳು. ಇಸ್ಲಾಂನಲ್ಲಿ ಅಮಾಯಕ ವ್ಯಕ್ತಿಯೊಬ್ಬನ ಅಪ್ರಚೋದಿತ ಹತ್ಯೆಯನ್ನು ಇಡೀ ಮಾನವಕುಲದ ಕೊಲೆ ಎಂದು ಪರಿಗಣಿಸಲಾಗುತ್ತದೆ.ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಎಲ್ಲಾ ನಾಗರಿಕರಲ್ಲಿ ಪ್ರತಿಯೊಂದು ಸಂದರ್ಭದಲ್ಲೂ ಶಾಂತಿ, ಸಹೋದರತ್ವ,ಭ್ರಾತೃತ್ವ ಮತ್ತು ಸಹಿಷ್ಣುತೆಯನ್ನು ಕಾಪಾಡಿಕೊಳ್ಳಲು ಮನವಿ ಮಾಡುತ್ತದೆ. ಇಂತಹ ಘಟನೆಗಳ ಉದ್ದೇಶ ಭಯ, ದ್ವೇಷ ಮತ್ತು ಕೋಮುವಾದವನ್ನು ಉತ್ತೇಜಿಸುವುದು ಮಾತ್ರ, ಇದನ್ನು ನಿಲ್ಲಿಸಲು ನಾವು ನೀವೆಲ್ಲರೂ ಒಂದಾಗಿ ಪ್ರಯತ್ನಿಸೋಣ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್