ಇಸ್ಲಮಾಬಾದ್, ಏ.24:ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಮಾರ್ಗದ ಮೂಲಕ ತಿರುಗೇಟು ನೀಡಿತ್ತು. ಭಾರತ ತೆಗೆದುಕೊಂಡ ಕಠಿಣ ಕ್ರಮಗಳ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಇಂದು ರಾಷ್ಟ್ರೀಯ ಭದ್ರತಾ ಸಮಿತಿ (ಎನ್ಎಸ್ಸಿ) ಸಭೆಯನ್ನು ನಡೆಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉನ್ನತ ನಾಗರಿಕ ಮತ್ತು ಮಿಲಿಟರಿ ನಾಯಕತ್ವ ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನಿ ವಾಯುಪ್ರದೇಶವನ್ನು ನಿರ್ಬಂಧಿಸುವುದು ಮತ್ತು ವಾಘಾ ಗಡಿಯನ್ನು ಮುಚ್ಚುವುದು ಸೇರಿದಂತೆ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಸಿಂಧೂ ನದಿಯ ನೀರನ್ನು ಬೇರೆಡೆಗೆ ತಿರುಗಿಸುವ ಯಾವುದೇ ಪ್ರಯತ್ನವು “ಯುದ್ಧದ ಕ್ರಿಯೆ” ಎಂದು ಹೇಳಿದೆ.
ಜೊತೆಗೆ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನ ಬಲವನ್ನು 30 ರಾಜತಾಂತ್ರಿಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಇಳಿಸಲಾಗುವುದು ಎಂದು ಪಾಕಿಸ್ತಾನ ಸರ್ಕಾರ ದೃಢಪಡಿಸಿದೆ. ಪಾಕಿಸ್ತಾನದ ಪ್ರಧಾನಿ ಸಚಿವಾಲಯ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನ ಬಲವನ್ನು ಏಪ್ರಿಲ್ 30, 2025ರಿಂದ ಜಾರಿಗೆ ಬರುವಂತೆ 30 ರಾಜತಾಂತ್ರಿಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಇಳಿಸಲಾಗುವುದು. ಪಾಕಿಸ್ತಾನದ ಮೂಲಕ ಯಾವುದೇ ಮೂರನೇ ದೇಶಕ್ಕೆ ಮತ್ತು ಅಲ್ಲಿಂದ ಭಾರತಕ್ಕೆ ಬರುವ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.
ಭಾರತದ ಸಿಖ್ ಧರ್ಮೀಯರು 24 ಗಂಟೆಯೊಳಗೆ ಪಾಕ್ ತೊರೆಯಬೇಕು ಎಂದು ಪಾಕಿಸ್ತಾನ ಆದೇಶ ಹೊರಡಿಸಿದೆ. ಇಸ್ಲಾಮಾಬಾದ್ನಲ್ಲಿರುವ ಭಾರತೀಯ ರಕ್ಷಣಾ, ನೌಕಾ ಪಡೆ, ವಾಯಪಡೆ ಸಲಹೆಗಾರರು ಪಾಕಿಸ್ತಾನ ತೊರೆಯಬೇಕು ಎಂದು ಸೂಚಿಸಲಾಗಿದೆ. ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿ ಸಂಖ್ಯೆಯನ್ನು 30ಕ್ಕೆ ಇಳಿಸಲು ನಿರ್ದೇಶಿಸಿದೆ.
ಇನ್ನು ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಭಾರತದ ಆರೋಪಗಳನ್ನು ‘ರಾಜಕೀಯ ಪ್ರೇರಿತ’ ಮತ್ತು ‘ಕಾನೂನುಬಾಹಿರ’ ಎಂದು ಪಾಕಿಸ್ತಾನ ಆರೋಪಿಸಿದೆ. ಸಿಖ್ ಯಾತ್ರಿಕರನ್ನು ಹೊರತುಪಡಿಸಿ ಭಾರತೀಯ ಪ್ರಜೆಗಳಿಗೆ ಎಲ್ಲಾ SAARC ವೀಸಾಗಳನ್ನು ಅಮಾನತುಗೊಳಿಸಲಾಗಿದೆ. ವಾಘಾ ಗಡಿಯನ್ನು ಮುಚ್ಚಲಾಗಿದೆ. ಭಾರತೀಯ ರಕ್ಷಣಾ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಪಾಕಿಸ್ತಾನ ಘೋಷಿಸಿದೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ