ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿರುವ ಪ್ರಕರಣ ತಿರುವು ಪಡೆದಿದ್ದು, ಮುಸ್ಲಿಂ ಎಂಬ ಕಾರಣಕ್ಕೆ ಯುವಕನನ್ನು ಗುಂಪು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗಿದ್ದು, ಸುಮಾರು 35ರಿಂದ 40 ವರ್ಷ ಪ್ರಾಯದ ಈ ಯುವಕನನ್ನು 50 ಮಂದಿಯ ಗುಂಪು ಬ್ಯಾಟ್, ದೊಣ್ಣೆಯಿಂದ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 50 ಜನರ ಗುಂಪಿನಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪತಿಯೂ ಭಾಗಿಯಾಗಿದ್ದರು ಎಂಬ ಆರೋಪಗಳು ಕೇಳಿಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಮತ್ತು ಸಿಪಿಎಂ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಪಿಎಂ ದ.ಕ ಜಿಲ್ಲಾ ಮುಖಂಡ ಮುನೀರ್ ಕಾಟಿಪಳ್ಳ, ಮಂಗಳೂರು ಬಳಿಯ ಕುಡುಪು ಮೈದಾನದ ಸಮೀಪ ಬಂದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ.
ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ ಎಂದು
ತಿಳಿಸಿದರು.
ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಮುನೀರ್ ಕಾಟಿಪಳ್ಳ ಆಗ್ರಹಿಸಿದರು
ಈ ಬಗ್ಗೆ ಮಾತನಾಡಿರುವ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಪೊಲೀಸರು ನಿಷ್ಪಕ್ಷಪಾತವಾಗಿ ಮತ್ತು ಗಂಭೀರವಾಗಿ ಈ ಪ್ರಕರಣವನ್ನು ಭೇದಿಸಬೇಕು, ವಿಶೇಷ ತನಿಖಾ ತಂಡವನ್ನು ರಚಿಸಿ ಅಮೂಲಾಗ್ರ ತನಿಖೆ ನಡೆಸಬೇಕು, ಸತ್ಯ ಹೊರಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿಯವರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಅಪಾದಿಸಿದರು.
ಘಟನೆ ಬಗ್ಗೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ