ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಮುಸ್ಲಿಮ್ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪು ಹತ್ಯೆಗೈದಿದ್ದು, ಪೊಲೀಸು ಇಲಾಖೆ ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದೆ. ಗೃಹ ಸಚಿವರು ಈ ಬಗ್ಗೆ ಮಾದ್ಯಮ ಹೇಳಿಕೆ ನೀಡಿ, ಹತ್ಯೆಗೆ ‘ ಕಾರಣ’ ವನ್ನು ಹೇಳಿ, ಹತನಾದ ವ್ಯಕ್ತಿ ಪಾಕಿಸ್ತಾನ ಝಿಂದಾಬಾದ್ ಕೂಗಿದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಗೃಹ ಸಚಿವರ ಪ್ರಸ್ತುತ ಹೇಳಿಕೆಯು, ಸಂಬಂಧಿತ ಘಟನೆಯನ್ನು ಸರಿದೂಗಿಸುವ ಪ್ರಯತ್ನದಲ್ಲಿ ಹೇಳಿದಂತಿದೆ.
ಈ ರೀತಿಯ ಹೇಳಿಕೆ ಸ್ವೀಕಾರಾರ್ಹವಾಗಲಾರದು. ಇಂತಹ ಹೇಳಿಕೆಗಳು ಜನರು ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರೋತ್ಸಾಹ ನೀಡಿದಂತಿದೆ. ಗೃಹ ಸಚಿವರು ಸರಕಾರದ ಭಾಗವಾಗಿ ಅಪರಾಧ ತಡೆಯುವ ನಿಟ್ಟಿನ ಹೇಳಿಕೆ ನೀಡಬೇಕಿತ್ತು, ಹೊರತು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿ ಯಾವುದೂ ಒಂದು ವಿಭಾಗವನ್ನು ತೃಪ್ತಿಪಡಿಸುವ ರೀತಿಯಲ್ಲಿರುವುದು ಖೇದಕರ.
ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ತಡೆಯುವ ಹೇಳಿಕೆಯನ್ನು ಜನರು ಗೃಹ ಸಚಿವರಿಂದ ನಿರೀಕ್ಷಿಸುತ್ತಿದ್ದಾರೆ. ಕರ್ನಾಟಕದ ಕಲಬುರ್ಗಿಯಲ್ಲಿ ಇತ್ತೀಚೆಗೆ ಇತರ ದೇಶದ ಧ್ವಜ ಹಾರಿಸಿದ ಕೃತ್ಯದಾರರ ಹಿನ್ನೆಲೆ ಜನರ ಮನಸ್ಸಿನಿಂದ ಮರೆಯಾಗುವ ಮೊದಲೇ ಗೃಹ ಸಚಿವರು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿರುವುದು ಸ್ವೀಕಾರಾರ್ಹವಲ್ಲ. ಗೃಹ ಸಚವರ ಸಮಗ್ರ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ ಎಂದು ಕೆ.ಅಶ್ರಫ್ ( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ