ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದಿದೆ.
ಇದು ಯಾವುದೇ ಕೋಮು ದ್ವೇಷದಿಂದ ಕೂಡಿದ ಹತ್ಯೆ ಅಲ್ಲ, ರೌಡಿಗಳ ಗ್ಯಾಂಗ್ ಸಂಬಂಧಿತ ಹತ್ಯೆಯಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ಬರಬೇಕಿದೆ.
ಮಂಗಳೂರಿನ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ನಿನ್ನೆ ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಕೊಲೆ ನಡೆಸಿ ಪರಾರಿಯಾಗಿದ್ದರು. ಘಟನೆಯ ವೀಡಿಯೋವನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಮುಸ್ಲಿಂ ಮಹಿಳೆಯರ ಪಾತ್ರವು ದುಷ್ಕರ್ಮಿಗಳ ಶೀಘ್ರ ಪತ್ತೆಯಲ್ಲಿ ನಿರ್ಣಾಯಕವಾಗಿದೆ. ದುಷ್ಕರ್ಮಿಗಳ ಕಾರು ಮತ್ತು ಪಿಕಪ್ ವಾಹನಗಳು ಸೇರಿದಂತೆ ಹಂತಕರ ಸಂಪೂರ್ಣ ಚಲನವಲನಗಳು ವೀಡಿಯೋದಲ್ಲಿ ಸೆರೆಹಿಡಿಯಲಾಗಿತ್ತು.
ಹತ್ಯೆ ಬಳಿಕ ತೀವ್ರ ಹಿಂದುತ್ವವಾದಿಗಳು ಅದನ್ನು ಫಾಝಿಲ್ ಹತ್ಯೆಯ ಪ್ರತೀಕಾರವೆಂಬಂತೆ ವೈಭವೀಕರಿಸಿ ಹತ್ಯೆಗೆ ಕೋಮು ಬಣ್ಣವನ್ನು ಬಳಿದು ಇಂದು ಜಿಲ್ಲಾ ಬಂದ್ ಗೆ ಕರೆ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಬಿಲದಿಂದ ಹೊರ ಬಂದ ರಾಜಕೀಯ ನಾಯಕರು ಸಹ ಇದರ ಲಾಭ ಕೊಯ್ಯಲು ಪ್ರಚೋದನೆಕಾರಿ ಹೇಳಿಕೆ ನೀಡಿ ಬೆಂಕಿಗೆ ತುಪ್ಪ ಸುರಿಯುವ ಪ್ರಯತ್ನ ಮಾಡಿದರು. ಇದರ ಫಲವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ಕೊಲೆ ಯತ್ನದಂತಹಾ ತಲವಾರು ದಾಳಿಗಳು ನಡೆದಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ