ಮಂಗಳೂರು : ‘ಭಾರತ ದೇಶದ ಸೇನೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ವಿದೇಶಿ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದ ಧೈರ್ಯ ಶ್ಲಾಘನೀಯ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಸೂಚನೆ ಆಗಿದೆ.
‘ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸುತ್ತಿದ್ದೇವೆ.
‘ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಕಿಡಿಗೇಡಿತನ ನಡೆಸುವ ನೆರೆಯ ಸರ್ವ ದೇಶಗಳಿಗೂ ಈ ಸೇನಾ ದಾಳಿ ಎಚ್ಚರಿಕೆಯ ಸೂಚನೆ ಆಗಿದೆ.
‘ರಾಷ್ಟ್ರೀಯ ಏಕತೆ, ಬಾತೃತ್ವ, ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಭಾರತದ ಸರ್ವ ಜನತೆ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.
ಭಾರತದ ಸೇನೆಯು ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ನಾಗರಿಕರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ಬೃಹತ್ ಸೆಲ್ಯೂಟ್.
‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ 26 ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಕೂಡಾ ವಿದೇಶದವರೇ ಎಂಬುವುದು ಸ್ಪಷ್ಟವಾಗಿದೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ. ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಉಪಯೋಗಿಸುತ್ತಿದ್ದ ಪಾಕಿಸ್ತಾನಕ್ಕೂ ನೀಡಿರುವ ಎಚ್ಚರಿಕೆ ಇದು ಆಗಿದೆ.
‘ಸೇನಾದಾಳಿ ಯೊಂದೇ ಭಾರತದ ಸಮಗ್ರ ಆಯ್ಕೆ. ಪಹಲ್ಗಾಮ್‌ನಲ್ಲಿ ನಡೆದ ಹತ್ಯೆ ನಡೆಸಿದ ಉಗ್ರಗಾಮಿಗಳು ವಿದೇಶಕ್ಕೆ ಸೇರಿದವರು.
‘ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ನೆಮ್ಮದಿ, ಸಮಾಧಾನ ಖಂಡಿತ ಲಭಿಸಬಹುದು.
ಭಾರತದ ಸೇನಾ ಕಾರ್ಯಾಚರಣೆ ಗೆಲುವಿಗೆ ಸರ್ವರೂ ತಮ್ಮ ಆರಾಧನಾ ಕ್ರಮದ ನಂತರ ಪ್ರಾರ್ಥನೆ ಕೈಗೊಳ್ಳಬೇಕೆಂದು ಕೋರುತ್ತಿದ್ದೇವೆ. ಭಾರತದ ಸೇನೆಯನ್ನು ಮುನ್ನಡೆಸುತ್ತಿರುವ ಕೂಲೋನಲ್ ಸೋಫಿಯಾ ಖುರೇಶಿ ಮತ್ತು ಕಮಾಂಡರ್ ವ್ಯೋಮಿಕಾ ಸಿಂಗ್ ಜೊತೆ ದೇಶದ ಪ್ರತಿ ಪ್ರಜೆ, ಸಮುದಾಯ, ಪಂಗಡ ಸಾಥ್ ನಿಳ್ಳುತ್ತಿದ್ದೇವೆ ಎಂದು ಕೆ.ಅಶ್ರಫ್ ( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ