ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮವು ಸಂಜೆ 5 ಗಂಟೆಯಿಂದಲೇ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಮೇ 12ರಂದು ಮಾತುಕತೆಗೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದು ಸಂತೋಷದಾಯಕ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.