ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ಗಾಳಿ ಕೂಡಾ ಬೀಸುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯಲ್ಲಿರುವ ಎಲ್ಲ ಮದರಸಗಳ ಆಡಳಿತ ಮಂಡಳಿಗಳು ಸದರ್ ಉಸ್ತಾದರುಗಳೊಂದಿಗೆ ಇಂದು ಮತ್ತು ನಾಳೆ( ಮೇ 25 & 26) ಮದರಸಗಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.
ಅಲ್ಲದೆ, ಮುಂದಿನ ದಿನಗಳಲ್ಲಿ ತೀವ್ರ ಮಳೆ ಆಗುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ನೀಡಿ ಆದೇಶಿಸಿದರೆ, ಮದರಸಗಳಿಗೂ ರಜೆ ನೀಡಲು ಈ ಮೂಲಕ ವಿನಂತಿಸಿದ್ದಾರೆ.







