ಮಂಗಳೂರು: ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಇಂದು ಸಂಘೀ ದುಷ್ಕರ್ಮಿಗಳು ವ್ಯವಸ್ಥಿತ, ಪೂರ್ವ ಯೋಜಿತವಾಗಿ ಹತ್ಯೆ ಮಾಡಿದ್ದು, ಅಮಾಯಕ ವ್ಯಕ್ತಿಯ ಹತ್ಯೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಹತ್ಯೆಯ ಸಂಚುದಾರರು ಈ ಹಿಂದೆಯೇ ಬಹಿರಂಗವಾಗಿ ಘೋಷಿಸಿದ್ದು ಪೊಲೀಸರು ಕೂಡಲೇ ಹತ್ಯೆಯಲ್ಲಿ ಭಾಗಿಯಾದ ನೇರ ಮತ್ತು ಪರೋಕ್ಷ ಕೃತ್ಯದಾರರನ್ನು ಬಂಧಿಸಬೇಕಿದೆ. ಹತ್ಯೆದಾರರು ಈ ಕೊಲೆಯನ್ನು ಮತೀಯ ವಿದ್ವೇಷದಿಂದ ಕೊಲೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿ ಯಾರಿಂದಲೂ ದ್ವೇಷಕ್ಕೆ ಗುರಿಯಾಗಿದ್ದ ವ್ಯಕ್ತಿ ಅಲ್ಲ. ಮರಳು ಸಾಗಣಿಕೆ ಪೂರೈಸಲು ಬರ ಮಾಡಿಕೊಂಡು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳ ಇಂತಹ ನಡೆ ಖಂಡನೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ( ಮಾಜಿ ಮೇಯರ್) ಪತ್ರಿಕಾ ಪ್ರಕಟಣೆ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ