ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಭುಗಿಲೆದ್ದಿರುವ ಕೋಮುವಾದಿ ಶಕ್ತಿಗಳ ಪ್ರಚೋದನಕಾರಿ ವರ್ತನೆಯನ್ನು ಹತೋಟಿಗೆ ತರುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ. ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಹತ್ಯೆಗಳಿಗೆ ಪ್ರಚೋದನೆ ನೀಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಒಟ್ಟಿನಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.
ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.
















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ