ಮಂಗಳೂರು: ಇತ್ತೀಚೆಗೆ ಕೋಮುವಾದಿ ದುಷ್ಕರ್ಮಿಗಳಿಂದ ಅಮಾಯಕ ಅಬ್ದುಲ್ ರಹೀಮ್ ಹತ್ಯೆ ಮತ್ತು ಖಲಂದರ್ ಶಾಫಿಯವರ ಮೇಲಿನ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ಸಮಿತಿ, ಅಮಾಯಕ ಮುಸ್ಲಿಂ ಯುವಕರನ್ನು ಗುರಿಯಾಗಿರಿಸಿ ನಡೆಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಜಿಲ್ಲೆಯಾದ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕೆಂದು ಆಗ್ರಹಿಸಿ ದಕ್ಷಿಣ ಜಿಲ್ಲಾ ಪಶ್ಚಿಮ ವಲಯ ಪೋಲಿಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್ ಐಪಿಎಸ್ ರವರಿಗೆ ಮನವಿ ಪತ್ರವನ್ನು ನೀಡಿದೆ.
ಹಂತಕರನ್ನೂ, ದ್ವೇಷ ಭಾಷಣ ಬಿಗಿದು ಹತ್ಯೆಗೆ ಪ್ರಚೋದನೆ ನೀಡಿದವರನ್ನೂ ಮತ್ತು ಹತ್ಯೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದವರನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಕಾನೂನಿನಡಿಯಲ್ಲಿ ಬಂಧಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದ,ಕ ವೆಸ್ಟ್ ಜಿಲ್ಲಾಧ್ಯಕ್ಷ ಜನಾಬ್ ಮುಹಮ್ಮದ್ ಹನೀಫ್ ಹಾಜಿ ಬಜ್ಪೆ, ಪ್ರಧಾನ ಕಾರ್ಯದರ್ಶಿ ಖತರ್ ಅಬ್ದುರ್ರಹೀಮ್ ಸಅದಿ, ಕೋಶಾಧಿಕಾರಿ ಅಹ್ಮದ್ ಬಶೀರ್ ಹಾಜಿ, ಕೆಎಂಜೆ ರಾಜ್ಯ ನಾಯಕರಾದ ಹಮೀದ್ ಬಜ್ಪೆ, ಕೆಎಂಜೆ ಜಿಲ್ಲಾ ನಾಯಕರಾದ ಅಬ್ದುಲ್ ಖಾದರ್ ಹಾಜಿ ಮುಡಿಪು, ಎಸ್ ಎಸ್ ಎಫ್ ದ.ಕ ಜಿಲ್ಲಾ ವೆಸ್ಟ್ ಉಪಾಧ್ಯಕ್ಷರಾದ ಸಿನಾನ್ ಸಖಾಫಿ ಅಜಿಲಮೊಗರು, ಕಾರ್ಯದರ್ಶಿ ಅಜ್ಮಲ್ ಕಾವೂರು ರವರು ಹಾಜರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ